ವಲಸೆ ಕಾರ್ಮಿಕರ ಹಿತಕ್ಕಾಗಿ ಕೇಂದ್ರದಿಂದ 11 ಸಾವಿರ ಕೋಟಿ.!
ರಾಷ್ಟ್ರೀಯ

ವಲಸೆ ಕಾರ್ಮಿಕರ ಹಿತಕ್ಕಾಗಿ ಕೇಂದ್ರದಿಂದ 11 ಸಾವಿರ ಕೋಟಿ.!

ಲಾಕ್‌ಡೌನ್‌ ಆರ್ಥಿಕ ಸಂಕಷ್ಟ ಹಿನ್ನಲೆಯಲ್ಲಿ ಮಂಗಳವಾರದಂದು ಪ್ರಧಾನಿ ಮೋದಿ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.

ಪ್ರತಿಧ್ವನಿ ವರದಿ

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಆತ್ಮನಿರ್ಭರ ವಿಶೇಷ ಆರ್ಥಿಕ ಪ್ಯಾಕೇಜಿನಲ್ಲಿ ವಲಸೆ ಕಾರ್ಮಿಕರಿಗೆ 11 ಸಾವಿರ ಕೋಟಿ ಮೀಸಲಿಡಲಾಗಿದೆ.

ಲಾಕ್‌ಡೌನ್‌ ಹಿನ್ನಲೆಯಲ್ಲಿ ಮಂಗಳವಾರದಂದು ಪ್ರಧಾನಿ ಮೋದಿ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಿದ್ದರು. ವಿತ್ತ ಸಚಿವಾಲಯ ಪ್ಯಾಕೇಜಿನ ವಿವರಣೆ ನೀಡುವ ಸಲುವಾಗಿ ಸರಣಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳಿತ್ತು.

ಇದರ ಭಾಗವಾಗಿ ಎರಡನೇ ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಲಸೆ ಕಾರ್ಮಿಕರ ಮೂಲ ಸೌಕರ್ಯ ಒದಗಿಸಲು SDRF ಗೆ (ರಾಜ್ಯ ವಿಪತ್ತು ನಿರ್ವಹಣಾ ನಿಧಿ) 11 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಈ ನಿಧಿಯನ್ನು ಆಹಾರ, ವಸತಿ ಮೊದಲಾದ ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸುವುದಾಗಿ ಹೇಳಿದ್ದಾರೆ.

Click here Support Free Press and Independent Journalism

Pratidhvani
www.pratidhvani.com