ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ
ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ
ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ

"ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆಗಳನ್ನು ನಡೆಸದಿರಲು ಆಯೋಗ ನಿರ್ಧರಿಸಿದೆ. ಚುನಾವಣೆಗಳನ್ನು ನಡೆಸಲು ಸಂಬಂಧಿಸಿದ ತೊಂದರೆಗಳನ್ನು ಹಾಗೂ ಸವಾಲುಗಳನ್ನು ಈ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು/ಮುಖ್ಯ ಚುನಾವಣಾ ಅಧಿಕಾರಿಗಳಿಂದ ಆಯೋಗವು ಸ್ವೀಕರಿಸಿದೆ" ಎಂದು ಆಯೋಗ ತಿಳಿಸಿದೆ.

ಅದೇ ವೇಳೆ ನವೆಂಬರ್ 7 ರಂದು ಬಿಹಾರದ ಒಂದು ಸಂಸದೀಯ ಕ್ಷೇತ್ರ ಮತ್ತು ಮಣಿಪುರದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಛತ್ತೀಸ್‌ಗಡ, ಗುಜರಾತ್, ಜಾರ್ಖಂಡ್, ಕರ್ನಾಟಕ, ನಾಗಾಲ್ಯಾಂಡ್, ಒಡಿಶಾದ 54 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ ಎಂದು ಆಯೋಗ ಹೇಳಿದೆ. ತೆಲಂಗಾಣ ಮತ್ತು ಉತ್ತರಪ್ರದೇಶದಲ್ಲಿ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಮತಗಳ ಎಣಿಕೆ ನಡೆಯಲಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com