ವಿಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ – ಪ್ರಧಾನಿ ಮೋದಿ ಟೀಕೆ

ರೈತರಿಗೆ ಅವರ ಬೆಳೆಯನ್ನು ಸ್ವತಂತ್ರವಾಗಿ ಮಾರಾಟ ಮಾಡುವ ಅವಕಾಶವನ್ನು ವಿಪಕ್ಷಗಳು ವಿರೋಧಿಸುತ್ತಿವೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ – ಪ್ರಧಾನಿ ಮೋದಿ ಟೀಕೆ

ಕೃಷಿ ಮಸೂದೆಗಳ ಕುರಿತು ವಿಪಕ್ಷಗಳು ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಮಂಗಳವಾರ ‘ನಮಾಮಿ ಗಂಗೆʼಯ ಆರು ಬೃಹತ್‌ ಯೋಜನೆಗಳ ಉದ್ಘಾಟನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಕೃಷಿ ಮಸೂದೆಗಳಿಂದ ಸಂಪೂರ್ಣ ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳು ಆದರೂ, ಕೇವಲ ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ರೈತರನ್ನು ಪ್ರಚೋದಿಸುತ್ತಿವೆ ಎಂದು ಹೇಳಿದ್ದಾರೆ.

ವಿಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ – ಪ್ರಧಾನಿ ಮೋದಿ ಟೀಕೆ
ನೂತನ ಕೃಷಿ ಮಸೂದೆ ವಿರೋಧಿಸಿ ರೈತ-ದಲಿತ-ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

“ರೈತರ ಯಂತ್ರಗಳನ್ನು ಸುಟ್ಟು ಹಾಕಿ ರೈತರಿಗೆ ಅಪಮಾನ ಮಾಡುತ್ತಿದ್ದಾರೆ. ಎಂಎಸ್‌ಪಿ ಕುರಿತು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ರೈತರಿಗೆ ಅವರ ಬೆಳೆಯನ್ನು ಸ್ವತಂತ್ರವಾಗಿ ಮಾರಾಟ ಮಾಡುವ ಅವಕಾಶವನ್ನು ವಿಪಕ್ಷಗಳು ವಿರೋಧಿಸುತ್ತಿವೆ,” ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದಲ್ಲಾಳಿಗಳ ಮುಖಾಂತರ ಕಪ್ಪು ಹಣ ಸಂಗ್ರಹಿಸುವುದಕ್ಕೆ ಅವಕಾಶ ಸಿಗದ ಕಾರಣ ಕೆಲವರು ಈ ಮಸೂದೆಗಳನ್ನು ವಿರೋಧಿಸುತ್ತಿದ್ದಾರೆ. ಕೃಷಿ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ, ಎಂದು ಅವರು ಹೇಳಿದ್ದಾರೆ.

ವಿಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ – ಪ್ರಧಾನಿ ಮೋದಿ ಟೀಕೆ
ಕೃಷಿ ಮಸೂದೆಗೆ ಮೋದಿ ಧಾವಂತ ಮತ್ತು ಕೃಷಿ ಹೂಡಿಕೆಗೆ ಅಂಬಾನಿ ಆತುರ!

ಇನ್ನು ನಮಾಮಿ ಗಂಗಾ ಯೋಜನೆಯ ಕುರಿತು ಮಾತನಾಡಿರುವ ಅವರು, ಸರ್ಕಾರವು ನಾಲ್ಕು ದಿಕ್ಕಿನಲ್ಲಿ ಈ ಯೋಜನೆಯನ್ನು ನೆರವೇರಿಸುತ್ತಿದೆ. ಮೊದಲನೆಯದು, ಕೊಳಚೆ ನೀರು ಗಂಗಾ ನದಿಗೆ ಸೇರದಂತೆ ನೋಡಿಕೊಳ್ಳುವುದು. ಎರಡನೇಯದು, ಮುಂದಿನ 10-15 ವರ್ಷಗಳ ಬೇಡಿಕೆಯನ್ನು ಈಡೇರಿಸುವಂತಹ ಕೊಳಚೆ ನೀರು ಶೂದ್ದೀಕರಣ ಘಟಕಗಳನ್ನು ನಿರ್ಮಿಸುವುದು. ಮೂರನೇಯದು, ಗಂಗಾ ನದಿಯ ತಟದಲ್ಲಿರುವಂತಹ ನೂರು ನಗರಗಳು ಹಾಗೂ 5000 ಹಳ್ಳಿಗಳನ್ನು ಬಯಲು ಶೌಚ ಮುಕ್ತವನ್ನಾಗಿಸುವುದು. ನಾಲ್ಕನೇಯದು ಗಂಗಾ ನದಿಯ ಉಪನದಿಗಳ ಶುಚಿತ್ವ, ಎಂದು ತಿಳಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com