ಭಾರತದಲ್ಲಿ ಒಂದು ಲಕ್ಷ ಮಂದಿಯನ್ನು ಬಲಿತೆಗೆದುಕೊಂಡ ಕರೋನಾ

ಅಕ್ಟೋಬರ್‌ ಮೂರರ ಆರೋಗ್ಯ ವರದಿ ಪ್ರಕಾರ ಭಾರತದಲ್ಲಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ ಒಂದು ಲಕ್ಷವನ್ನು ದಾಟಿದೆ.
ಭಾರತದಲ್ಲಿ ಒಂದು ಲಕ್ಷ ಮಂದಿಯನ್ನು ಬಲಿತೆಗೆದುಕೊಂಡ ಕರೋನಾ

ಅಕ್ಟೋಬರ್‌ ಮೂರರ ಆರೋಗ್ಯ ವರದಿ ಪ್ರಕಾರ ಭಾರತದಲ್ಲಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ ಒಂದು ಲಕ್ಷವನ್ನು ದಾಟಿದೆ.

ಭಾರತದಲ್ಲಿ ಕರೋನಾ ವೈರಸ್‌ ತೀವ್ರವಾಗಿ ಹರಡುತ್ತಿದ್ದು, ದಿನವೊಂದಕ್ಕೆ 70-80 ಸಾವಿರದಷ್ಟು ಹೊಸ ಪ್ರಕರಣಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ 79, 476 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 64,73,545 ತಲುಪಿದೆ. ದೇಶದಲ್ಲಿ 9,44,996 ಸಕ್ರಿಯ ಪ್ರಕರಣಗಳಿದೆ. ಸರ್ಕಾರದಲ್ಲಿ ಲಭ್ಯವಿರುವ ಅಂಕಿಅಂಶದ ಪ್ರಕಾರ 54,27,707 ಮಂದಿ ಕರೋನಾದಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 1069 ಕರೋನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮರಣ ಹೊಂದಿದವರ ಸಂಖ್ಯೆ 1,00,842 ತಲುಪಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com