ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಮಾಜಿ ರಾಜ್ಯ ಸಚಿವರಾಗಿದ್ದ ರೇ ಅವರನ್ನು ಕ್ರಿಮಿನಲ್ ಪಿತೂರಿ ಮತ್ತು ಇತರ ಅಪರಾಧಗಳಿಗೆ ಶಿಕ್ಷೆಗೊಳಪಡಿಸಲಾಗಿದೆ.
ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ

1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ವಿಶೇಷ ನ್ಯಾಯಾಲಯ ಮಂಗಳವಾರ ತಪ್ಪಿತಸ್ಥ ಎಂದು ಘೋಷಿಸಿದೆ.

ವಿಶೇಷ ನ್ಯಾಯಾಧೀಶ ಭಾರತ್ ಪರಾಶರ್ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಮಾಜಿ ರಾಜ್ಯ ಸಚಿವರಾಗಿದ್ದ ರೇ ಅವರನ್ನು ಕ್ರಿಮಿನಲ್ ಪಿತೂರಿ ಮತ್ತು ಇತರ ಅಪರಾಧಗಳಿಗೆ ಶಿಕ್ಷೆಗೊಳಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್ ಗೆ ಕೂಡಾ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಜಾರ್ಖಂಡ್‌ನ ಗಿರಿಡಿಹ್‌ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣ ಕುರಿತು ವಾದಗಳನ್ನು ಆಲಿಸಲಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com