ಕೇಂದ್ರ ಮಂತ್ರಿ ರಾಮ್‌ ವಿಲಾಸ್‌ ಪಾಸ್ವಾನ್‌ ನಿಧನ

ಎಂಟು ಬಾರಿ ಲೋಕಸಭಾ ಸದಸ್ಯರಾಗಿ ರಾಮ್‌ ವಿಲಾಸ್‌ ಪಾಸ್ವಾನ್ ಆಯ್ಕೆಯಾಗಿದ್ದರು.
ಕೇಂದ್ರ ಮಂತ್ರಿ ರಾಮ್‌ ವಿಲಾಸ್‌ ಪಾಸ್ವಾನ್‌ ನಿಧನ

ಇತ್ತೀಚಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ (74) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ಫೋರ್ಟೀಸ್‌ ಆಸ್ಪತ್ರೆಯಲ್ಲಿ ಅವರು ದಾಖಲಾಗಿದ್ದರು.

ಪ್ರಸ್ತುತ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಇವರು, ದೇಶದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರು. ಎಂಟು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಇವರ ಅಗಲಿಕೆಯನ್ನು ಘೋಷಿಸಿದ ಅವರ ಮಗ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌, ನೀವು ಈ ಪ್ರಪಂಚದಲ್ಲಿ ಇರದಿದ್ದರೂ, ನನ್ನೊಂದಿಗೆ ಯಾವಗಲೂ ಇರುತ್ತೀರಿ ಎಂದು ಟ್ವೀಟ್‌ ಮಾಡಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com