ಬಂದೂಕು ತೋರಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ

ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಪ್ರಕಾರ, 22 ವರ್ಷದ ಸಂತ್ರಸ್ತೆ ಮಹಿಳೆ ಮನೆಯಲ್ಲಿ ಒಬ್ಬಳೇ ಇರುವಾಗ ಆಗಮಿಸಿದ ಇಬ್ಬರು ಆರೋಪಿಗಳು, ಬಂದೂಕು ತೋರಿಸಿ ಒಬ್ಬರಾದ ಮೇಲೊಬ್ಬರು ಅತ್ಯಾಚಾರ ನಡೆಸಿದ್ದಾರೆ
ಬಂದೂಕು ತೋರಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಗ್ರಾಮದ ಮಾಜೀ ಮುಖ್ಯಸ್ಥ ಸೇರಿದಂತೆ ಇಬ್ಬರು ಬಂದೂಕು ತೋರಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.

ವಾರದ ಹಿಂದೆಯೇ ಈ ಘಟನೆ ನಡೆದಿದ್ದು, ಪೊಲೀಸರಿಗೆ ಭಾನುವಾರ ಮಾಹಿತಿ ದೊರೆತಿದೆ ಎಂದು SP ಕೇಶವ್‌ ಚೌಧರಿ ಪತ್ರಕರ್ತರಿಗೆ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಪ್ರಕಾರ, 22 ವರ್ಷದ ಸಂತ್ರಸ್ತೆ ಮಹಿಳೆ ಮನೆಯಲ್ಲಿ ಒಬ್ಬಳೇ ಇರುವಾಗ ಆಗಮಿಸಿದ ಇಬ್ಬರು ಆರೋಪಿಗಳು, ಬಂದೂಕು ತೋರಿಸಿ ಒಬ್ಬರಾದ ಮೇಲೊಬ್ಬರು ಅತ್ಯಾಚಾರ ನಡೆಸಿದ್ದಾರೆ. ಈ ವಿಷಯವನ್ನು ಯಾರಲ್ಲಾದರೂ ಹೇಳದಂತೆ ಬೆದರಿಕೆ ಒಡ್ಡಿದ್ದಾರೆ.

ಬಂದೂಕು ತೋರಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ
ದಲಿತ ವಕೀಲನ ಕೊಲೆಗೆ ಕಾರಣವಾದ ಬ್ರಾಹ್ಮಣ್ಯ ಭಯೋತ್ಪಾದನೆಯನ್ನು ವಿರೋಧಿಸಿ – ನಟ ಚೇತನ್

ಸಂಬಂದಪಟ್ಟ ಭಾರತೀಯ ದಂಡಸಂಹಿತೆ ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲು SHO, ಸರ್ಕಲ್ ಅಧಿಕಾರಿ ಮತ್ತು ಹೆಚ್ಚುವರಿ ಎಸ್‌ಪಿ ನೇತೃತ್ವದ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ ಮೊದಲ ವಾರದಲ್ಲಿ ಉತ್ತರ ಪ್ರದೇಶದ ಮುಝಫ್ಫರ್‌ ನರದಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಬಂದೂಕು ತೋರಿಸಿ ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರನ್ನು ಅತ್ಯಾಚಾರ ನಡೆಸಿದ್ದಾಗಿ ದೂರು ದಾಖಲಾಗಿತ್ತು.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com