ಶೀಘ್ರವೇ ಜಾರಿಗೆ ಬರಲಿದೆ ಪೌರತ್ವ ತಿದ್ದುಪಡಿ ಕಾಯ್ದೆ – ಜೆ ಪಿ ನಡ್ಡಾ

ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಪೌರತ್ವ (ತಿದ್ದುಪಡಿ) ಕಾಯ್ದೆಯು ಬಿಜೆಪಿಯ ಪ್ರಮುಖ ಅಸ್ತ್ರವಾಗಿರಲಿದೆ ಎಂಬುವುದನ್ನು ಜೆಪಿ ನಡ್ಡಾ ಮಾತು ಸೂಚಿಸುತ್ತದೆ.
ಶೀಘ್ರವೇ ಜಾರಿಗೆ ಬರಲಿದೆ ಪೌರತ್ವ ತಿದ್ದುಪಡಿ ಕಾಯ್ದೆ – ಜೆ ಪಿ ನಡ್ಡಾ

ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನ ವಿಳಂಬವಾಗಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸಿಎಎ ಅನುಷ್ಟಾನಕ್ಕೆ ನಮ್ಮ ಪಕ್ಷ ಬದ್ಧವಾಗಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆ.ಪಿ.ನಡ್ಡಾ, "ಸಿಎಎಯನ್ನು ಈಗಾಗಲೇ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ನೀವೆಲ್ಲರೂ ಪೌರತ್ವ (ತಿದ್ದುಪಡಿ) ಕಾಯ್ದೆಯ ಪ್ರಯೋಜನಗಳನ್ನು ಪಡೆಯುತ್ತೀರಿ. ಇದನ್ನು ಅನುಷ್ಟಾನಗೊಳಿಸಲು ನಾವು ಬದ್ಧರಾಗಿದ್ದೇವೆ, ಕರೋನವೈರಸ್ ಕಾರಣದಿಂದಾಗಿ ಈ ಕಾನೂನು ಅನುಷ್ಠಾನವು ವಿಳಂಬವಾಯಿತು. " ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರೋನಾ ವೈರಸ್ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದೆ ಮತ್ತು ಸಿಎಎ ಅನುಷ್ಠಾನಗೊಳಿಸುವ ಮಾತು ಪ್ರಾರಂಭವಾಗಿದೆ. ಅದಕ್ಕಾಗಿ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ನಡ್ಡಾ ಹೇಳಿದ್ದಾರೆ.

"ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ, ಅದರ ಅನುಷ್ಠಾನವು ವಿಳಂಬವಾಯಿತು. ಆದರೆ ಕರೋನಾ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿರುವುದರಿಂದ ಕೆಲಸ ಪ್ರಾರಂಭವಾಗಿದೆ. ಈಗ ನಿಯಮಗಳನ್ನು ರೂಪಿಸಲಾಗುತ್ತಿದೆ ಮತ್ತು ಸಿಎಎ ಶೀಘ್ರದಲ್ಲೇ ಜಾರಿಗೆ ಬರಲಿದೆ. ಈ ಕಾಯ್ದೆಯಡಿಯಲ್ಲಿ ಎಲ್ಲಾ ಅರ್ಹ ಜನರು ಖಂಡಿತವಾಗಿಯೂ ಭಾರತೀಯ ಪೌರತ್ವ ಪಡೆಯುತ್ತಾರೆ ಎಂದು ಜೆಪಿ ನಡ್ಡಾ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಒಟ್ಟಿನಲ್ಲಿ ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಪೌರತ್ವ (ತಿದ್ದುಪಡಿ) ಕಾಯ್ದೆಯು ಬಿಜೆಪಿಯ ಪ್ರಮುಖ ಅಸ್ತ್ರವಾಗಿರಲಿದೆ ಎಂಬುವುದನ್ನು ಜೆಪಿ ನಡ್ಡಾ ಮಾತು ಸೂಚಿಸುತ್ತದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com