ಲೋಕಸಭೆ, ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಚುನಾವಣಾ ಖರ್ಚು ಮಿತಿ ಹೆಚ್ಚಳ

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಬಿಹಾರ ವಿಧಾನಸಭೆ, ಲೋಕಸಭೆಯ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ
ಲೋಕಸಭೆ, ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಚುನಾವಣಾ ಖರ್ಚು ಮಿತಿ ಹೆಚ್ಚಳ

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು ಶೇ.10 ರಷ್ಟು ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎದುರಾಗಬಹುದಾದ ತೊಂದರೆಗಳನ್ನು ಪರಿಗಣಿಸಿ ಚುನಾವಣಾ ಆಯೋಗ ಖರ್ಚಿನ ಮಿತಿಯನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಬಿಹಾರ ವಿಧಾನಸಭೆ, ಲೋಕಸಭೆಯ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.

ಅಧಿಸೂಚನೆಯ ಪ್ರಕಾರ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು 70 ಲಕ್ಷ ರೂಪಾಯಿಗಳಿಂದ 77 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿದ್ದರೆ, ಸಣ್ಣ ರಾಜ್ಯಗಳಲ್ಲಿ ಈ ಮೊತ್ತವನ್ನು 54 ಲಕ್ಷ ರೂಪಾಯಿಗಳಿಂದ 59 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ವಿಧಾನಸಭಾಚುನಾವಣೆಗೆಸ್ಪರ್ಧಿಸುವಅಭ್ಯರ್ಥಿಗಳಖರ್ಚಿನಮಿತಿಯನ್ನು 28 ಲಕ್ಷಗಳಿಂದ 30.8 ಲಕ್ಷಗಳಿಗೆಏರಿಕೆಮಾಡಲಾಗಿದೆ. ಸಣ್ಣ ರಾಜ್ಯಗಳಲ್ಲಿಈಹಿಂದೆ 20 ಲಕ್ಷಮಿತಿಇದ್ದಮಿತಿಯನ್ನು 22 ಲಕ್ಷಗಳಿಗೆಏರಿಕೆಮಾಡಲಾಗಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com