ತಮಿಳು ನಾಡು: NEET ನಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ಪರೀಕ್ಷೆ(NEET) ಉತ್ತೀರ್ಣರಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಒಪ್ಪಿಗೆ ನೀಡಿದ್ದಾರೆ.

ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಿಂದಲೇ ಮೀಸಲಾತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯನಿರ್ವಾಹಕ ಕ್ರಮವನ್ನು ತೆಗೆದುಕೊಂಡ ಒಂದು ದಿನ ಬಳಿಕ ರಾಜ್ಯಪಾಲರು ಮಸೂದೆಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ ಎಂದು ರಾಜ್ ಭವನ ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ವಿಚಾರವಾಗಿ ಸೆಪ್ಟೆಂಬರ್‌ 26 ರಂದು ರಾಜ್ಯಪಾಲರು ಭಾರತದ ಸಾಲಿಸಿಟರ್ ಜನರಲ್ ಅವರ ಕಾನೂನು ಅಭಿಪ್ರಾಯವನ್ನು ಕೋರಿದ್ದರು , ಅಕ್ಟೋಬರ್ 29 ರಂದು ಅವರ ಅಭಿಪ್ರಾಯವನ್ನು ಸ್ವೀಕರಿಸಲಾಗಿದೆ ಎಂದು ರಾಜ್ ಭವನ ಅಧಿಕೃತ ಪ್ರಕಟಣೆ ತಿಳಿಸಿದೆ. "ಅಭಿಪ್ರಾಯ ಬಂದ ತಕ್ಷಣ, ಗೌರವಾನ್ವಿತ ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡಿದ್ದಾರೆ" ಎಂದು ಹೇಳಿಕೆ ತಿಳಿಸಿದೆ.

ಪುರೋಹಿತ್ ಮಸೂದೆಗೆ ಅಂಕಿತ ಹಾಕಲು ವಿಳಂಬ ಮಾಡುತ್ತಿದ್ದಾರೆ ಎಂದು ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪ ಹೊರಿಸಿದ್ದರು.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com