ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್

ಬಾಂಬೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ನಾಬ್‌ ಗೋಸ್ವಾಮಿ ಅರ್ಜಿ ಸಲ್ಲಿದ್ದಾರೆ.
ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್

ರಿಪಬ್ಲಿಕ್‌ ಟಿವಿ ಮುಖ್ಯಸ್ಥ, ಸುದ್ದಿ ನಿರೂಪಕ ಅರ್ನಾಬ್‌ ಗೋಸ್ವಾಮಿ ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಅರ್ನಾಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಿಸಿತ್ತು. ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಜಸ್ಟೀಸ್‌ ಎಸ್‌ ಎಸ್‌ ಶಿಂದೆ ಹಾಗೂ ಜಸ್ಟೀಸ್‌ ಎಂ ಎಸ್‌ ಕಾರ್ಣಿಕ್‌ ಅವರಿದ್ದ ಪೀಠವು, ಅರ್ನಾಬ್‌ ಗೋಸ್ವಾಮಿ ಅವರಿಗೆ ಸೆಕ್ಷನ್‌ 493ರ ಅಡಿಯಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಈ ಅರ್ಜಿಯನ್ನು ನಾಲ್ಕು ದಿನದ ಒಳಗಾಗಿ ಸೆಷನ್ಸ್‌ ನ್ಯಾಯಾಲಯವು ಇತ್ಯರ್ಥಪಡಿಸಬೇಕು ಎಂದು ಹೇಳಿತ್ತು.

ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್
ಹೌದು, ನಾನೊಬ್ಬ ಪತ್ರಕರ್ತೆ, ಹಾಗಾಗಿ ನಾನು ಅರ್ನಾಬ್ ಬೆಂಬಲಿಸಲಾರೆ!

ಈ ಹಿನ್ನೆಲೆಯಲ್ಲಿ ಅರ್ನಬ್‌ ಗೋಸ್ವಾಮಿ ಸೋಮವಾರ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಅಲಿಬಾಗ್‌ನಲ್ಲಿರುವ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇದೀಗ ಬಾಂಬೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ನಾಬ್‌ ಗೋಸ್ವಾಮಿ ಅರ್ಜಿ ಸಲ್ಲಿದ್ದಾರೆ. ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ.

ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್
ಅರ್ನಾಬ್‌ ಬಂಧನ: ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರದ ಮಂತ್ರಿಗಳು

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯ್ಕ್‌ ಆತ್ಮಹತ್ಯೆ ಪ್ರಕರಣದಲ್ಲಿ ಕಳೆದ ಬುಧವಾರ ಬಂಧನಕ್ಕೊಳಗಾಗಿದ್ದ ಅರ್ನಾಬ್‌ ಗೋಸ್ವಾಮಿಯನ್ನು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಭಾನುವಾರ ತಲೋಜ ಜೈಲಿಗೆ ಸ್ಥಳಾಂತರಿಸಿದ ಅರ್ನಾಬ್‌ರನ್ನು ದಿನಕ್ಕೆ 3 ತಾಸುಗಳು ವಿಚಾರಣೆ ನಡೆಸಲು ಸೆಷನ್ಸ್‌ ಕೋರ್ಟ್‌ ಪೊಲೀಸರಿಗೆ ಅನುಮತಿ ನೀಡಿತ್ತು.

ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್
ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈ ಕೋರ್ಟ್: ಸೆಷನ್ಸ್‌ ಕೋರ್ಟ್‌ ಮೊರೆ ಹೋದ ಅರ್ನಾಬ್

ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ತಪ್ಪಾಗಿ ನಿರ್ವಹಿಸಿದ ಆರೋಪದ ಮೇಲೆ ವಿರಾರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ವರಡೆ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಕೊಂಕಣ್‌ ಪ್ರಾಂ‌ತ್ಯ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಸಂಜಯ್ ಮೊಹಿತೆ, ಮೀರಾ ಭಾಯಂದರ್ ವಸೈ ವಿರಾರ್ (ಎಂಬಿವಿವಿ) ಆಯುಕ್ತ ಸದಾನಂದ್ ಅವರಿಗೆ ಪತ್ರ ಬರೆದಿದ್ದಾರೆ. ವರಾಡೆ‌ ಅವರು ಅಲಿಬಾಗ್ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಅವಧಿಯಲ್ಲಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ಮುಕ್ತಾಯಗೊಳಿಸಿ ವರದಿಯನ್ನು ಸಲ್ಲಿಸಿದರು.

ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್
ಅರ್ನಾಬ್ ಗೋಸ್ವಾಮಿಗೆ ಸಮನ್ಸ್ ನೀಡುವಂತೆ ಬಾಂಬೆ ಹೈಕೋರ್ಟ್ ನಿರ್ದೇಶನ

ಅರ್ನಾಬ್‌ ಬಂಧನವು ಮಹಾರಾಷ್ಟ್ರ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಮಾತಿನ ಚಕಮಕಿಗೆ ಕಾರಣವಾಗಿದೆ. ಕೇಂದ್ರ ಮಂತ್ರಿಗಳು ಸೇರಿದಂತೆ ಬಿಜೆಪಿ ನಾಯಕರು ಅರ್ನಾಬ್‌ ಪರ ಬೆಂಬಲಕ್ಕೆ ನಿಂತಿದ್ದಾರೆ.


ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್
ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com