ವಿವಾದಾತ್ಮಕ ʼಕೇರಳ ಪೊಲೀಸ್ ಕಾಯ್ದೆ ತಿದ್ದುಪಡಿʼಯಿಂದ ಹಿಂದೆ ಸರಿದ ಕೇರಳ

ಪೊಲೀಸ್ ಕಾಯ್ದೆ ತಿದ್ದುಪಡಿಯ ನಿರ್ಧಾರಕ್ಕೆ ಪ್ರತಿಪಕ್ಷಗಳು, ಸಾಮಾಜಿಕ ಹೋರಾಟಗಾರರು, ಕಾನೂನು ತಜ್ಞರು ವಿರೋಧ ವ್ಯಕ್ತಪಡಿಸಿದ್ದರು. LDF‌ ಅನ್ನು ಬೆಂಬಲಿಸಿದ್ದವರು ಕೂಡಾ ಸರ್ಕಾರದ ಈ ನಡೆಗೆ ಕಳವಳ ವ್ಯಕ್ತಪಡಿಸಿದ್ದರು.
ವಿವಾದಾತ್ಮಕ ʼಕೇರಳ ಪೊಲೀಸ್ ಕಾಯ್ದೆ ತಿದ್ದುಪಡಿʼಯಿಂದ ಹಿಂದೆ ಸರಿದ ಕೇರಳ

ಕೇರಳ ಪೊಲೀಸ್ ಕಾಯ್ದೆ 2011 ರ ತಿದ್ದುಪಡಿಯ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾದ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ರಾಜ್ಯ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಶಾಸಕರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. "ಈಗ ತಿದ್ದುಪಡಿಯನ್ನು ಜಾರಿಗೆ ತರಲು ಉದ್ದೇಶಿಸಿಲ್ಲ" ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವಾದಾತ್ಮಕ ʼಕೇರಳ ಪೊಲೀಸ್ ಕಾಯ್ದೆ ತಿದ್ದುಪಡಿʼಯಿಂದ ಹಿಂದೆ ಸರಿದ ಕೇರಳ
ಕೇರಳ: ವಿವಾದಾತ್ಮಕ ಪೊಲೀಸ್ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಗೀಕಾರ

ಪೊಲೀಸ್ ಕಾಯ್ದೆ ತಿದ್ದುಪಡಿಯ ಘೋಷಣೆಯೊಂದಿಗೆ, ವಿವಿಧ ಕ್ಷೇತ್ರದ ತಜ್ಞರಿಂದ ವಿಭಿನ್ನ ಅಭಿಪ್ರಾಯಗಳು ಹುಟ್ಟಿಕೊಂಡಿದ್ದವು. ಎಲ್‌ಡಿಎಫ್‌ ಅನ್ನು ಬೆಂಬಲಿಸಿದ್ದವರು ಕೂಡಾ ಎಲ್‌ಡಿಎಫ್‌ ಸರ್ಕಾರದ ಈ ನಡೆಗೆ ಕಳವಳ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ, ಕಾನೂನನ್ನು ತಿದ್ದುಪಡಿ ಮಾಡುವ ಉದ್ದೇಶವನ್ನು ಹೊಂದಿಲ್ಲ‌, ಈ ಕುರಿತು ವಿಧಾನಸಭೆಯಲ್ಲಿ ವಿವರವಾದ ಚರ್ಚೆ ನಡೆಯಲಿದ್ದು, ಎಲ್ಲ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇರಳ ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com