ರಾಷ್ಟ್ರೀಯ
ಅಸ್ಸಾಮ್ ಮಾಜಿ ಮುಖ್ಯಮಂತ್ರಿ ತರುಣ್ ಗೊಗಾಯ್ ನಿಧನ
ಅಕ್ಟೋಬರ್ ತಿಂಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗೊಗಾಯ್ ಅವರನ್ನು ನವೆಂಬರ್ 2 ರಂದು ಮತ್ತೆ GMCH ಗೆ ದಾಖಲಿಸಲಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಮ್ ಮಾಜಿ ಮುಖ್ಯಮಂತ್ರಿ ತರುಣ್ ಗೊಗಾಯ್ ಮೃತಪಟ್ಟಿದ್ದಾರೆ. ಕಳೆದ ಆಗಸ್ಟ್ನಲ್ಲಿ ಕೋವಿಡ್ ಪಾಸಿಟಿವ್ ಬಂದ ಬಳಿಕ ಗೊಗಾಯ್ ಅವರನ್ನು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ (GMCH) ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಅಕ್ಟೋಬರ್ ತಿಂಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗೊಗಾಯ್ ಅವರನ್ನು ನವೆಂಬರ್ 2 ರಂದು ಮತ್ತೆ GMCH ಗೆ ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗೊಗಾಯ್ ಅವರನ್ನು ಡಯಾಲಿಸಿಸ್ಗೆ ಒಳಪಡಿಸಲಾಗಿತ್ತು ಹಾಗೂ ವೆಂಟಿಲೇಟರ್ ಅಳವಡಿಸಲಾಗಿತ್ತು. ಅದಾಗ್ಯೂ ಚಿಕಿತ್ಸೆ ಫಲಕಾರಿ ಕಾಣದೆ ಗೊಗಾಯ್ ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಗೊಗಾಯ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.