ಚೆನ್ನೈ ಸೈಬರ್ ಕ್ರೈಮ್ ಪೊಲೀಸರಿಂದ ಮಾಜಿ ನ್ಯಾಯಾಧೀಶ ಸಿಎಸ್ ಕರ್ಣನ್ ಬಂಧನ

ಈ ಹಿಂದೆಯೂ ಕರ್ಣನ್ ಅವರು ಜೈಲು ಶಿಕ್ಷೆ ಅನುಭವಿಸಿದ್ದರು. ಕಲ್ಕತ್ತಾ ಹೈಕೋರ್ಟ್‌ ನ್ಯಾಯಾಧೀಶರಾಗಿದ್ದ ಕರ್ಣನ್‌ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಶಿಕ್ಷೆ ವಿಧಿಸಲಾಗಿತ್ತು.
ಚೆನ್ನೈ ಸೈಬರ್ ಕ್ರೈಮ್ ಪೊಲೀಸರಿಂದ ಮಾಜಿ ನ್ಯಾಯಾಧೀಶ ಸಿಎಸ್ ಕರ್ಣನ್ ಬಂಧನ

ಹೈಕೋರ್ಟ್ ಮಾಜಿ ನ್ಯಾಯಾಧೀಶ ಸಿ.ಎಸ್. ಕರ್ಣನ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ನ್ಯಾಯಾಧೀಶರು ಮತ್ತು ನ್ಯಾಯಾಧೀಶರ ಪತ್ನಿಯರ ವಿರುದ್ಧ ಮಾಡಿದ ಅವಾಚ್ಯ ನಿಂದನೆಗಳಿಗೆ ಚೆನ್ನೈ ಸೈಬರ್ ಕ್ರೈಮ್ ಪೊಲೀಸರು ಬಂಧಿಸಲಾಗಿದೆ.

ಸಿ.ಎಸ್. ಕರ್ಣನ್ ಅವರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು, ನ್ಯಾಯಾಧೀಶರ ಪತ್ನಿಯರ ವಿರುದ್ಧ ಮಾನಹಾನಿಕರ ಮತ್ತು ಅಪಮಾನಕಾರಿ ಟೀಕೆಗಳನ್ನು ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಆರೋಪಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಅಕ್ಟೋಬರ್ 27 ರಂದು ಮದ್ರಾಸ್ ಹೈಕೋರ್ಟ್‌ನ ವಕೀಲರ ದೂರಿನ ಹಿನ್ನೆಲೆಯಲ್ಲಿ ಚೆನ್ನೈ ಪೊಲೀಸ್ ಸೈಬರ್ ಸೆಲ್ ಕರ್ಣನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿರಿಯ ಅಧಿಕಾರಿಯೊಬ್ಬರು ಹೇಳಿದಂತೆ ಕರ್ಣನ್ ಮಹಿಳೆಯರ ವಿರುದ್ಧ ಅಪಮಾನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪ ಹೊರಿಸಿ ಮದ್ರಾಸ್ ಹೈಕೋರ್ಟ್ ನ ಹಿರಿಯ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಎ ಬೊಬ್ಡೆ ಅವರಿಗೆ ಪತ್ರ ಬರೆದಿದ್ದರು.

ಈ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳದ ಕಾರಣ ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಈ ಹಿಂದೆಯೂ ನ್ಯಾಯಮೂರ್ತಿ ಕರ್ಣನ್ ಅವರು ಜೈಲು ಶಿಕ್ಷೆ ಅನುಭವಿಸಿದ್ದರು. ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಕರ್ಣನ್‌ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಶಿಕ್ಷೆ ವಿಧಿಸಲಾಗಿತ್ತು.

ಆ ಸಮಯದಲ್ಲಿ, ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಸುಪ್ರೀಂ ಕೋರ್ಟ್ನ ಏಳು ನ್ಯಾಯಾಧೀಶರ ಪೀಠವು ಪಶ್ಚಿಮ ಬಂಗಾಳ ಪೊಲೀಸ್ ಮುಖ್ಯಸ್ಥರಿಗೆ ಕರ್ಣನ್‌ ಅವರನ್ನು ವಶಕ್ಕೆ ತೆಗೆದುಕೊಳ್ಳುವಂತೆ ಕೇಳಿಕೊಂಡಿತ್ತು. ಹಲವು ವಾರಗಳ ಕಾಲ ನಾಪತ್ತೆಯಾಗಿದ್ದ ಅವರನ್ನು, ಅವರ ಮೊಬೈಲ್ ಫೋನ್ ಟ್ರಾಕ್‌ ಮಾಡುವ ಮೂಲಕ ಪತ್ತೆ ಹಚ್ಚಲಾಗಿತ್ತು.

ಕರ್ಣನ್‌ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗೆ ಹಾಜರಾದ ಮೊದಲ ಸಿಟ್ಟಿಂಗ್ ಹೈಕೋರ್ಟ್ ನ್ಯಾಯಾಧೀಶರೂ ಆಗಿದ್ದರು. ಅವರನ್ನು ಮೊದಲು 2009 ರಲ್ಲಿ ಮದ್ರಾಸ್ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. ಬಳಿಕ 2016 ರಲ್ಲಿ ಕಲ್ಕತ್ತಾ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಕಳೆದ ವರ್ಷ, ಮಾಜಿ ನ್ಯಾಯಾಧೀಶರು ಅವರು 2018 ರಲ್ಲಿ ಭ್ರಷ್ಟಾಚಾರ ವಿರೋಧಿ ಡೈನಾಮಿಕ್ ಪಕ್ಷದ (ಎಸಿಡಿಪಿ) ಅಭ್ಯರ್ಥಿಯಾಗಿ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com