ಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ

ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಮಹಿಳೆಯರೂ ವಾಹನಗಳನ್ನು ಚಾಲನೆ ಮಾಡಿದ್ದು ಕಂಡುಬಂದಿದೆ. ಜನವರಿ 26ರ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ
ಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ
312907814288101


ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುವುದಾಗಿ ಘೋಷಿಸಿದ್ದ ರೈತ ಹೋರಾಟಗಾರರು, ಇದಕ್ಕೆ ಪೂರ್ವಭಾವಿಯಾಗಿ ತಾಲೀಮಿನ ರೂಪದಲ್ಲಿ ದೆಹಲಿಯ ಗಡಿಗಳಲ್ಲಿ ಟ್ರ್ಯಾಕ್ಟರ್‌ ಮೆರವಣಿಗೆ ನಡೆಸಿದರು. ಕಳೆದ 43 ದಿನಗಳಿಂದ ದೆಹಲಿ ಬೆಸೆಯುವ ಎಲ್ಲ ಮುಖ್ಯ ರಸ್ತೆಗಳ ಗಡಿಗಳಲ್ಲಿ ರೈತ ಹೋರಾಟ ನಡೆಸುತ್ತಿದ್ದು, ಸರ್ಕಾರದೊಂದಿಗಿನ ಇದುವರೆಗೆ ಏಳು ಸುತ್ತಿನ ಮಾತುಕತೆ ಫಲ ನೀಡಿಲ್ಲ. ಮಸೂದೆಯನ್ನು ಹಿಂತೆಗೆದುಕೊಳ್ಳದೆ, ರೈತರ ಮನವೊಲಿಸುವ ಯತ್ನದಲ್ಲೇ ಇರುವ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ರೈತ ಸಂಘಟನೆಗಳು ಈ ವಿನೂತನ ಪ್ರತಿಭಟನೆ ನಡೆಸಿದವು.

ತಾಲೀಮಿನ ರೂಪದಲ್ಲಿ ಸುಮಾರು ನೂರಾರು ಟ್ರ್ಯಾಕ್ಟರ್‌ಗಳು ಮೆರವಣಿಗೆಯಲ್ಲಿ ಸಾಗಿದವು. ಹರೆಯದ ಉತ್ಸಾಹಿಗಳಿಂದ ಹಿಡಿದು 70ರ ವಯೋಮಾನ ಹಿರಿಯರು ಈ ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ


ಮಾಸ್‌‌ ಮೀಡಿಯಾ ಫೌಂಡೇಶನ್‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಿಭಟನಾ ನಿರತ ರೈತರು, " ಜನವರಿ 26ರಂದು ನಾವು ಟ್ರ್ಯಾಕ್ಟರ್‌ ಮೆರವಣಿಗೆ ನಡೆಸುವುದು ನಿಶ್ಚಿತ. ಹರ್ಯಾಣ, ರಾಜಸ್ಥಾನ, ಪಂಜಾಬ್‌, ಉತ್ತರ ಪ್ರದೇಶದ ಸುಮಾರು 3000 ಟ್ರ್ಯಾಕ್ಟರ್‌ಗಳು ಪಾಲ್ಗೊಳ್ಳಲಿವೆ ಎಂದು ಹೇಳಿದರು.


ಟ್ರ್ಯಾಕ್ಟರ್‌ ಮೆರವಣಿಗೆಯಲ್ಲಿ ಮಹಿಳೆಯರೂ ವಾಹನಗಳನ್ನು ಚಾಲನೆ ಮಾಡಿದ್ದು ಕಂಡುಬಂದಿದೆ. ಜನವರಿ 26ರ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದರು.

ಮೋದಿ ಸರ್ಕಾರ, ರೈತ ವಿರೋಧಿ ಮೂರು ಮಸೂದೆಗಳ ವಿರುದ್ಧ ಘೋಷಣೆ ಕೂಗಿದ ರೈತರು, ಮಸೂದೆ ಹಿಂಪಡೆಯದೆ ಹೋರಾಟ ನಿಲ್ಲುವುದೇ ಇಲ್ಲ ಎಂದರು.

ಜ. 26ರ ಪರೇಡ್‌ಗೆ ತಾಲೀಮು; ದೆಹಲಿ ಗಡಿಗಳಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ
ದೆಹಲಿ ಟ್ರಾಕ್ಟರ್‌ ಮೆರವಣಿಗೆ; 3500 ಕ್ಕೂ ಹೆಚ್ಚು ಟ್ರಾಕ್ಟರ್‌ಗಳು ಭಾಗಿ

ರೈತ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜ. 11ರಂದು ಏಳನೆಯ ಬಾರಿಗೆ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದು, ಎರಡು ಮುಖ್ಯ ಬೇಡಿಕೆಗಳು ಚರ್ಚೆಯಾಗಲಿವೆ. ಒಂದು, ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವುದು ಮತ್ತು ಕನಿಷ್ಟ ಬೆಂಬಲ ಬೆಲೆ ಕುರಿತು ಚರ್ಚೆ ನಡೆಯಲಿದೆ.

(ಸದ್ಯದ ರೈತರ ಹೋರಾಟವನ್ನು ಹಲವು ಮಾಧ್ಯಮಗಳು ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿವೆ. ಹೀಗಿರುವಾಗ ಇಂದಿನ ರೈತರ ಹೋರಾಟದ ಕೂಗನ್ನು ಜನರಿಗೆ ತಲುಪಿಸುವ ಜವಾಬ್ದಾರಿ "ಮಾಸ್‌ ಮೀಡಿಯಾ ಫೌಂಡೇಷನ್‌" ಹೊತ್ತಿದೆ. ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್ʼ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ ಸಿದ್ಧಪಡಿಸಲಾಗಿದೆ)

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com