ಕೋವಿಡ್ ಲಸಿಕೆ ವಿತರಣೆ: ಸೋಮವಾರ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

ದೇಶದಲ್ಲಿನ ಈಗಿನ ಕೋವಿಡ್-19 ಸೋಂಕಿನ ಪರಿಸ್ಥಿತಿ ಮತ್ತು ಲಸಿಕೆ ಬಳಕೆಯ ವಿಚಾರ ಕುರಿತು ಸೋಮವಾರ ಸಂಜೆ 4 ಗಂಟೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಛೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ತಿಳಿಸಲಾಗಿದೆ.
ಕೋವಿಡ್ ಲಸಿಕೆ ವಿತರಣೆ: ಸೋಮವಾರ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

ಕರೋನಾ ಲಸಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರದಂದು ಸಭೆ ನಡೆಸಲಿದ್ದಾರೆ.

ಮೊದಲಿಗೆ ತೀವ್ರ ಅಪಾಯಕಾರಿ ವರ್ಗದವರಿಗೆ ಮತ್ತು ಇಡೀ ದೇಶದ ಜನರಿಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೇಶದಲ್ಲಿನ ಈಗಿನ ಕೋವಿಡ್-19 ಸೋಂಕಿನ ಪರಿಸ್ಥಿತಿ ಮತ್ತು ಲಸಿಕೆ ಬಳಕೆಯ ವಿಚಾರ ಕುರಿತು ಸೋಮವಾರ ಸಂಜೆ 4 ಗಂಟೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಛೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ತಿಳಿಸಲಾಗಿದೆ

ಸೀರಂ ಇಂಸ್ಟಿಟ್ಯೂಟ್ ತಯಾರಿಸಿದ ಕೋವಿಶೀಲ್ಡ್ ಲಸಿಕೆ ಹಾಗು ಭಾರತ್ ಬಯೋಟೆಕ್ನ ಕೋವಾಕ್ಸಿನ್ ಈಗಾಗಲೆ ಸಾರ್ವಜನಿಕ ಬಳಕೆಗೆ ಅನುಮೋದನೆ ಪಡೆದಿದ್ದು, ರಾಜ್ಯಗಳಲ್ಲಿ ಲಸಿಕೆ ವಿತರಣೆಯ ಪ್ರಕ್ರಿಯೆ ನಡೆಸಲಾಗುತ್ತಿದೆ. ದೇಶದಲ್ಲಿ ಕೋವಿಡ್ ಸಮಸ್ಯೆ ಎದುರಾದಲ್ಲಿಂದ ಇಲ್ಲಿಯವರೆಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ 6 ಬಾರೀ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದ್ದು, ಇದೀಗ ಕೋವಿಡ್ ಲಸಿಕೆ ಅನುಮೋದನೆ ನಂತರ ಪ್ರಧಾನಿ ಮೊದಲ ಬಾರಿಗೆ ಲಸಿಕೆ ಕುರಿತು ಸಂವಾದ ನಡೆಸಲಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಲಸಿಕೆ ಬಳಕೆಗೆ ಆದ್ಯತೆ ನೀಡಲಾಗುತ್ತದೆ. ಎಲ್ಲಾ ಭಾರತೀಯರಿಗೂ ಲಸಿಕೆ ನೀಡುವುದರ ಕುರಿತು ಚಿಂತನೆ ಮಾಡಲಾಗಿದೆ. ಸರ್ಕಾರ ಈ ವಿಚಾರ ಕುರಿತು ಹೆಚ್ಚಿನ ಗಮನಹರಿಸಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಸ್ಪಷ್ಟಪಡಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com