ನಾನು ಒಬ್ಬಂಟಿಯಲ್ಲ ನನಗೆ ಜನಬೆಂಬಲವಿದೆ -ಮಮತಾ ಬ್ಯಾನರ್ಜಿ

ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಗಲಭೆಯನ್ನು ಪ್ರೋತ್ಸಾಹಿಸಿದಂತೆ. ನಿಮಗೆ ಗಲಭೆ, ದಂಗೆ ಬೇಕಾದರೆ ಬಿಜೆಪಿಗೆ ಮತ ಚಲಾಯಿಸಿ ಎಂದು ಬ್ಯಾನರ್ಜಿ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ.
ನಾನು ಒಬ್ಬಂಟಿಯಲ್ಲ ನನಗೆ ಜನಬೆಂಬಲವಿದೆ -ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆ, ಮಮತಾ ಬ್ಯಾಜರ್ಜಿ ನೇತೃತ್ವದ ಟಿಎಂಸಿ ಮತ್ತು ಬಿಜೆಪಿಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮತದಾರರನ್ನು ಸೆಳೆಯಲು ಟಿಎಂಸಿ, ಬಿಜೆಪಿಗರ ಚುನಾವಣಾ ಪ್ರಚಾರ ಮೆರವಣಿಗೆ ಸಭೆಗಳು ನಡೆಸುತ್ತಿವೆ. ಫೆಬ್ರವರಿ 10 ರಂದು ಮಾಲ್ಡಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಗಲಭೆಯನ್ನು ಪ್ರೋತ್ಸಾಹಿಸಿದಂತೆ. ನಿಮಗೆ ಗಲಭೆ ದಂಗೆ ಬೇಕಾದರೆ ಬಿಜೆಪಿ ಗೆ ಮತ ಚಲಾಯಿಸಿ ಎಂದು ಬ್ಯಾನರ್ಜಿ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಾನು ಒಬ್ಬಂಟಿಯಲ್ಲ ನನಗೆ ಜನ ಬೆಂಬಲವಿದೆ ಎಂದು ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಹೊರಹಾಕಿದ್ದಾರೆ. ನಾನು ಜೀವಂತವಾಗಿರುವವರೆಗೂ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಮಾಲ್ಡಾ ಚುನಾವಣಾ ಪ್ರಚಾರ ಭಾಷಣದಲ್ಲಿ ಬಿಜೆಪಿಗರಿಗೆ ಸವಾಲೆಸೆದಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆಯೇರಲು ಹರಸಾಹಸ ಪಡುತ್ತಿದೆ. ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಮೆರವಣಿಗೆ, ಸಭೆ ನಡೆಸಲಾಗಿದ್ದು, ಪಶ್ಚಿಮ‌ ಬಂಗಾಳದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ. ಮತ್ತೊಂದೆಡೆ ಟಿಎಂಸಿ ಪ್ರಬಲ ನಾಯಕರಾದ ಸುವೆಂದು ಅಧಿಕಾರಿ ಸೇರಿದಂತೆ ಹಲವರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಒಟ್ಟಾರೆ ಟಿಎಂಸಿ, ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com