ರಾಜ್ಯಸಭೆ ವಿಪಕ್ಷ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್‌ ಸೇರಿದಂತೆ ಇತರ ನಾಲ್ಕು ಜನ ಸದಸ್ಯರು ನಿವೃತ್ತಿ ಹೊಂದಲಿದ್ದಾರೆ.
ರಾಜ್ಯಸಭೆ ವಿಪಕ್ಷ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿದ್ದಾರೆ. ಈವರೆಗೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿ ಇದ್ದಂತಹ ಗುಲಾಂ ನಬಿ ಆಜಾದ್‌ ಅವರು ನಿವೃತ್ತಿಗೊಂಡ ಹಿನ್ನೆಲೆಯಲ್ಲಿ, ಖರ್ಗೆ ಅವರು ಆಜಾದ್‌ರ ಸ್ಥಾನ ತುಂಬಲಿದ್ದಾರೆ.

ಖರ್ಗೆ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿರುವ ಕುರಿತು ಕಾಂಗ್ರೆಸ್‌ ರಾಜ್ಯಸಭೆಯ ಸಭಾಪತಿ ಆದ ವೆಂಕಯ್ಯ ನಾಯ್ಡು ಅವರಿಗೆ ಅಧಿಕೃತವಾಗಿ ಪತ್ರವನ್ನು ಬರೆದಿದೆ. ಈ ಹಿಂದೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಕೂಡಾ ಮಲ್ಲಿಕಾರ್ಜುನ ಖರ್ಗೆ ಅವರು ಸಮರ್ಥವಾಗಿ ನಿಭಾಯಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಸೋತ ಕಾರಣದಿಂದಾಗಿ, ರಾಜ್ಯಸಭೆಗೆ ಕರ್ನಾಟಕದಿಂದ ಅವರನ್ನು ಆಯ್ಕೆ ಮಾಡಿ ಕಳುಹಿಸಲಾಗಿತ್ತು.

ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್‌ ಸೇರಿದಂತೆ ಇತರ ನಾಲ್ಕು ಜನ ಸದಸ್ಯರು ನಿವೃತ್ತಿ ಹೊಂದಲಿದ್ದಾರೆ. ಆಜಾದ್‌ ಅವರ ನಿವೃತ್ತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾವುಕರಾಗಿದ್ದರು ಕೂಡಾ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com