ಫೆಬ್ರವರಿ 12 ರಂದು ಮುರಾದಾಬಾದ್ನಲ್ಲಿ ನಡೆದ ಮಹಾಪಂಚಾಯತ್ನಲ್ಲಿ ಭಾರತೀಯ ಕಿಸಾನ್ ಯೂನಿಯನ್ನ ರಾಕೇಶ್ ಟಿಕಾಯತ್ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು.
ಉತ್ತರ ಪ್ರದೇಶದ ಆರು ಜಿಲ್ಲೆಗಳ ಬಿಕೆಯು ಸಂಘಟನೆಯ ಜಿಲ್ಲಾ ಹಾಗೂ ಮಂಡಲ್ ಮಟ್ಟದ ಪದಾಧಿಕಾರಿಗಳು ಹಾಗೂ ಅಸಂಖ್ಯಾತ ರೈತರು ಭಾಗವಹಿಸಿದ್ದರು.
ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯಲೇಬೇಕು ಎಂದು ಮುರಾದಾಬಾದ್ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ರೈತರು ಆಗ್ರಹಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಮಹಾಪಂಚಾಯತ್ನಲ್ಲಿ ಭಾಗವಹಿಸಿರುವ ಎಲ್ಲಾ ರೈತರಿಗೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪೊಲೀಸರು ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿಡಲು ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಹರಿಯಾಣದಲ್ಲಿ ನಡೆದ ಅಹಿತಕರ ಘಟನೆ ಇಲ್ಲಿ ಮರುಕಳಿಸದಂತೆ ಎಚ್ಚರ ವಹಿಸಲಾಗಿದೆ.
ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಲಾಗಿದೆ.