ಫೆ. 14 ನ್ನು ಯಾವೊಬ್ಬ ಭಾರತೀಯನೂ ಮರೆಯುವುದಿಲ್ಲ: ಪ್ರಧಾನಿ ಮೋದಿ

ನಮ್ಮ ಸೈನಿಕರ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ನೆನಪಿರಲಿದೆ. ದೇಶದ ಜನತೆಗೆ ಅದರಲ್ಲೂ ಯುವಜನಾಂಗಕ್ಕೆ ಸೈನಿಕರ ಶೌರ್ಯ ಹಾಗೂ ಸಾಹಸಗಳು ಸ್ಪೂರ್ತಿದಾಯಕವಾಗಲಿದೆ ಎಂದು ಮೋದಿ ಹೇಳಿದ್ದಾರೆ
ಫೆ. 14 ನ್ನು ಯಾವೊಬ್ಬ ಭಾರತೀಯನೂ ಮರೆಯುವುದಿಲ್ಲ: ಪ್ರಧಾನಿ ಮೋದಿ

ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಸೇನೆಗೆ ಅರ್ಜುನ್‌ ಯುದ್ಧ ಟ್ಯಾಂಕರ್‌ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪುಲ್ವಾಮ ದಾಳಿಯನ್ನು ನೆನಪಿಸಿದ್ದಾರೆ.

2019ರ ಫೆಬ್ರವರಿ 14ರಂದು ನಡೆದ ಪುಲ್ವಾಮ ದಾಳಿಯ ಕುರಿತಂತೆ ಮಾತನಾಡಿದ ಮೋದಿ, ʼ ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ಭಯೋತ್ಪಾದಕ ದಾಳಿ ನಡೆಯಿತು. ಆ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆʼ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಮ್ಮ ಸೈನಿಕರ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ನೆನಪಿರಲಿದೆ. ದೇಶದ ಜನತೆಗೆ ಅದರಲ್ಲೂ ಯುವಜನಾಂಗಕ್ಕೆ ಸೈನಿಕರ ಶೌರ್ಯ ಹಾಗೂ ಸಾಹಸಗಳು ಸ್ಪೂರ್ತಿದಾಯಕವಾಗಲಿದೆ ಎಂದು ಮೋದಿ ಹೇಳಿದ್ದಾರೆ.

2019ರ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ 40 ಕ್ಕೂ ಹೆಚ್ಚು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಬಳಿಕ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯ ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಅರ್ಜುನ್ ಯುದ್ಧ ಟ್ಯಾಂಕರನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿದ ಬಳಿಕ ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com