ಪಶ್ಚಿಮ ಬಂಗಾಳ ವಿಶೇಷ ನ್ಯಾಯಾಲಯದಿಂದ ಅಮಿತ್‌ ಶಾಗೆ ಸಮನ್ಸ್‌ ಜಾರಿ

ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣದಲ್ಲಿ ಉತ್ತರಿಸಲು ಖುದ್ದು ಅಥವಾ ವಕೀಲರ ಮೂಲಕ ಅಮಿತ್‌ ಶಾ ಹಾಜರಾತಿ ಅಗತ್ಯ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಶೇಷ ನ್ಯಾಯಾಲಯದಿಂದ ಅಮಿತ್‌ ಶಾಗೆ ಸಮನ್ಸ್‌ ಜಾರಿ

ಪಶ್ಚಿಮ ಬಂಗಾಳದ ಮುಂಬರುರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜಕೀಯ ಚಟುವಟಿಕೆಗಳು ತೀವ್ರ ರಂಗೇರಿದೆ. ರಾಜಕೀಯ ನಾಯಕರ ವೈಯಕ್ತಿಕ ಕೆಸರೆರಚಾಟವೂ ಜೋರಾಗಿಯೇ ನಡೆಯುತ್ತಿದೆ.

ಈ ನಡುವೆ ಕೇಂದ್ರ ಗೃಹಮಂತ್ರಿಗೆ ಪಶ್ಚಿಮ ಬಂಗಾಳದ ನ್ಯಾಯಾಲಯವೊಂದು ಮಾನಹಾನಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಮನ್ಸ್‌ ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಶುಕ್ರವಾರ ಸಮನ್ಸ್‌ ಜಾರಿ ಮಾಡಿದೆ.

ಫೆಬ್ರವರಿ 22 ರಂದು ಬೆಳಗ್ಗೆ 10 ಗಂಟೆಗೆ ಅಮಿತ್‌ ಶಾ ಅವರು ಖುದ್ದಾಗಿ ಅಥವಾ ವಕೀಲರ ಮೂಲಕ ಕೋರ್ಟ್‌ ಎದುರು ಹಾಜರಾಗಬೇಕು ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳ ವಿಶೇಷ ನ್ಯಾಯಾಲಯದಿಂದ ಅಮಿತ್‌ ಶಾಗೆ ಸಮನ್ಸ್‌ ಜಾರಿ
ನನ್ನ ಎದುರಿಸುವುದು ಬಿಡಿ, ಮೊದಲು ಅಭಿಷೇಕ್ ನ್ನು ಎದುರಿಸಿ: ಅಮಿತ್‌ ಶಾಗೆ ಮಮತಾ ಸವಾಲು!

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 500ರ ಅಡಿಯಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣದಲ್ಲಿ ಉತ್ತರಿಸಲು ಖುದ್ದು ಅಥವಾ ವಕೀಲರ ಮೂಲಕ ಅಮಿತ್‌ ಶಾ ಹಾಜರಾತಿ ಅಗತ್ಯ ಎಂದು ನ್ಯಾಯಾಧೀಶರು ಹೇಳಿದ್ದಾರೆ.

2018ರ ಆಗಸ್ಟ್‌ 11ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಅಮಿತ್‌ ಶಾ ಅವರು ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ವಕೀಲ ಸಂಜಯ್‌ ಬಸು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com