ರಾಷ್ಟ್ರೀಯ
ಸಾಮಾಜಿಕ ಹೋರಾಟಗಾರ ವರವರ ರಾವ್ಗೆ ಜಾಮೀನು
ಎಲ್ಗರ್ ಪರಿಷದ್ ಪ್ರಕರಣ ಹಾಗೂ ಮಾವೋವಾದಿಗಳ ಜೊತೆ ನಂಟು ಹೊಂದಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು
ಸಾಮಾಜಿಕ ಹೋರಾಟಗಾರ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಎಲ್ಗರ್ ಪರಿಷದ್ ಪ್ರಕರಣ ಹಾಗೂ ಮಾವೋವಾದಿಗಳ ಜೊತೆ ನಂಟು ಹೊಂದಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ರಾವ್ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಜಾಮೀನು ನಂತರ ಅವರು ಮುಂಬೈ ಬಿಟ್ಟು ಬೇರೆಡೆಗೆ ತೆರಳದಿರುವಂತೆ ಹಾಗೂ ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.