ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್

ಉತ್ತಮವಾಗಿ ಕಾರ್ಯ ನಿರ್ವಹಿಸದೇ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಾಡಲು ಮತ್ತು ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ
ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್

ನರೇಂದ್ರ ಮೋದಿ ಸರ್ಕಾರ ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುತ್ತಿರುವುದು ಟೀಕೆಗೆ ಗುರಿಯಾಗುತ್ತಿರುವ ನಡುವೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಖಾಸಗೀಕರಣವನ್ನು ಸಮರ್ಥಿಸಿದ್ದಾರೆ.

‘ಉತ್ತಮವಾಗಿ ಕಾರ್ಯ ನಿರ್ವಹಿಸದೇ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಾಡಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ’ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ಆರ್ಥಿಕ ಪ್ರಕೋಷ್ಠವು ಕೇಂದ್ರ ಬಜೆಟ್‌ ಕುರಿತು ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಮಾತಿತ್ತು. ದೀನದಯಾಳ್‌ ಉಪಾಧ್ಯಾಯರ ‘ಅಂತ್ಯೋದಯ’ ಚಿಂತನೆಗಳೊಂದಿಗೆ ಇಂತಹ ಮಾತುಗಳನ್ನು ತೊಡೆದು ಹಾಕಲು ಕೇಂದ್ರ ಸರ್ಕಾರವು ಶ್ರಮಿಸುತ್ತಿದೆ’ ಎಂದು ಹೇಳಿದ್ದಾರೆ.

‘ಉಜ್ವಲ, ಉಜಾಲಾ, ಸ್ವನಿಧಿ, ಮುದ್ರಾ, ಜನೌಷಧಿ, ಕಿಸಾನ್ ಸಮ್ಮಾನ್‍ನಂಥ ಯೋಜನೆಗಳ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವು ಬಡವರ ಸಮಸ್ಯೆಗಳನ್ನು ನಿವಾರಿಸಲು ಆದ್ಯತೆ ನೀಡಿದೆ. ಉಜ್ವಲ ಯೋಜನೆಯಡಿ ಈಗಾಗಲೇ 8 ಕೋಟಿ ಬಡವರಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ನೀಡಿದ್ದು, ಈ ಬಜೆಟ್‍ನಡಿ ಮತ್ತೆ 1 ಕೋಟಿಗಳಷ್ಟು ಅರ್ಹ ಬಡವರಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು’ ಎಂದು ಹೇಳಿದ್ದಾರೆ.

ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್
ಇಂಧನ ಬೆಲೆ ಏರಿಕೆಯಲ್ಲಿ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ; ನಿರ್ಮಲಾ ಸೀತಾರಾಮನ್

‘1969ರಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ನಡೆದರೂ ಬಡವರಿಗೆ ಅದರಿಂದ ವಿಶೇಷ ಪ್ರಯೋಜನ ಲಭಿಸಿರಲಿಲ್ಲ. ಆಧಾರ್ ಸಂಖ್ಯೆಯನ್ನು ಮೊಬೈಲ್‍ ಸಂಖ್ಯೆಗೆ ಜೋಡಿಸಿ ಜನಧನ್ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರಿಂದ ನಿಜವಾದ ಬಡವರಿಗೆ ಈ ಯೋಜನೆಯ ಪ್ರಯೋಜನ ಲಭಿಸುತ್ತಿದೆ’ ಎಂದು ತಿಳಿಸಿದ್ದಾರೆ.‌

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com