ಮಹಾರಾಷ್ಟ್ರ: ಒಂದೇ ಹಾಸ್ಟೆಲ್‌ ನ 229 ವಿದ್ಯಾರ್ಥಿಗಳಲ್ಲಿ ಕರೋನಾ ಧೃಡ

ಮಹಾರಾಷ್ಟ್ರದಲ್ಲಿ ಬುಧವಾರ 8,807 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದು ಕಳೆದ ನಾಲ್ಕು ತಿಂಗಳಲ್ಲಿ ಅತೀ ಹೆಚ್ಚಿನ ದಾಖಲೆಯಾಗಿದೆ.
ಮಹಾರಾಷ್ಟ್ರ: ಒಂದೇ ಹಾಸ್ಟೆಲ್‌ ನ 229 ವಿದ್ಯಾರ್ಥಿಗಳಲ್ಲಿ ಕರೋನಾ ಧೃಡ

ಮಹಾರಾಷ್ಟ್ರದಲ್ಲಿ ಕರೋನಾ ಸಂಖ್ಯೆ ವಿಪರೀತ ಹೆಚ್ಚುತ್ತಿರುವಂತೆಯೇ, ಒಂದೇ ಹಾಸ್ಟೆಲ್‌ನ 229 ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್‌ ವರದಿ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ವಾಶಿಮ್‌ ಜಿಲ್ಲೆಯ ಸರ್ಕಾರಿ ಶಾಲೆಯ ಹಾಸ್ಟೆಲ್‌ ನ 327 ವಿದ್ಯಾರ್ಥಿಗಳಲ್ಲಿ 229 ವಿದ್ಯಾರ್ಥಿಗಳಿಗೆ ಕೋವಿಡ್‌ ಪತ್ತೆಯಾಗಿದ್ದು, ನಾಲ್ವರು ಸಿಬ್ಬಂದಿಗಳಿಗೂ ಕರೋನಾ ಪತ್ತೆಯಾಗಿರುವುದನ್ನು ನೋಡಲ್‌ ಅಧಿಕಾರಿಗಳು ಧೃಡಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶವನ್ನು ಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಫೆಬ್ರುವರಿ 14 ರಂದು ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಮರಳಿದ್ದು, ಪ್ರಾರಂಭದ ಕೆಲ ವಾರಗಳಲ್ಲಿ 21 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು’ ಎಂದು ತಹಶೀಲ್ದಾರ್ ಅಜಿತ್ ಶೆಲಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬುಧವಾರ 8,807 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದು ಕಳೆದ ನಾಲ್ಕು ತಿಂಗಳಲ್ಲಿ ಅತೀ ಹೆಚ್ಚಿನ ದಾಖಲೆಯಾಗಿದೆ. ಬುಧವಾರ 80 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೆ ಒಟ್ಟು 51,937 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com