ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ₹ 13,500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ, ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ನ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
“ನೀರವ್ ಮೋದಿ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ನೀರವ್ ಮೋದಿ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮತ್ತು ಮಾನಸಿಕ ಆರೋಗ್ಯ ಆರೈಕೆ ಸಿಗಲಿದೆ " ಎಂದು ಬ್ರಿಟನ್ ಕೋರ್ಟ್ ನ ನ್ಯಾಯಾಧೀಶ ಸ್ಯಾಮ್ಯುಯೆಲ್ ಗೂಜಿ ಆದೇಶದಲ್ಲಿ ಹೇಳಿದ್ದಾರೆ.
ಭಾರತಕ್ಕೆ ಹಸ್ತಾಂತರಿಸದಂತೆ ನೀರವ್ ಮೋದಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ವಂಚನೆ ಪ್ರಕರಣಗಳ ಆರೋಪ ಎದುರಿಸಲು ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಕೋರ್ಟ್ ಹೇಳಿದೆ.
"ನೀರವ್ ಮೋದಿ ಎದುರಿಸುತ್ತಿರುವ ವಂಚನೆಯ ಆರೋಪಗಳಿಗೆ ಮನವರಿಕೆಯಾಗುವಂತಹ ಸಾಕ್ಷ್ಯಗಳಿವೆ, ಅವರನ್ನು ಭಾರತಕ್ಕೆ ಕಳಿಸಿದರೆ ಅವರಿಗೆ ನ್ಯಾಯದಾನದ ನಿರಾಕರಣೆಯಾಗುವುದಿಲ್ಲ" ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಈ ಆದೇಶವನ್ನು ಪ್ರಶ್ನಿಸಿ ಲಂಡನ್ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನೀರವ್ ಮೋದಿಗೆ 14 ದಿನಗಳ ಅವಕಾಶವಿದೆ.