ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಮುಷ್ಕರದ ಎರಡು ದಿನಗಳಲ್ಲಿ ದೇಶದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಕೆನರಾ ಬ್ಯಾಂಕ್‌ ಗುರುವಾರ ಹೇಳಿದೆ.
ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಅಸಮಾಧಾನಗೊಂಡ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಮಾರ್ಚ್ 15 ಮತ್ತು 16 ರಂದು ಬ್ಯಾಂಕಿಂಗ್ ಉದ್ಯಮದಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ.

ಸಂಪೂರ್ಣ ಬ್ಯಾಂಕಿಂಗ್‌ ವಲಯದ ಸಮಸ್ಯೆಗೆ ಸಂಬಂಧಿಸಿದಂತೆ ಮುಷ್ಕರ ನಡೆಸಲಾಗುತ್ತಿದೆಯೇ ಹೊರತು, ಈ ಮುಷ್ಕರವು ಯಾವುದೇ ಒಂದು ನಿರ್ದಿಷ್ಟ ಬ್ಯಾಂಕಿನ ಸಮಸ್ಯೆಗೆ ಸಂಬಂಧಿಸಿದಂತೆ ಅಲ್ಲ ಎಂದು UFBU ಸ್ಪಷ್ಟಪಡಿಸಿದೆ.

ದೊಡ್ಡ ಮಟ್ಟದ ಮುಷ್ಕರವಾಗಿರುವುದರಿಂದ ಆ ಎರಡು ದಿನಗಳಲ್ಲಿ ದೇಶದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಕೆನರಾ ಬ್ಯಾಂಕ್‌ ಗುರುವಾರ ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

UFBU ಎರಡು ದಿನ ಮುಷ್ಕರಕ್ಕೆ ನೀಡಿರುವ ಕರೆಯ ಕುರಿತಂತೆ ಭಾರತೀಯ ಬ್ಯಾಂಕುಗಳ ಒಕ್ಕೂಟ (IBA) ನಮಗೆ ಮಾಹಿತಿ ನೀಡಿದೆ. ಉದ್ದೇಶಿತ ಮುಷ್ಕರದ ದಿನ ಕಚೇರಿಗಳು ಮತ್ತು ಶಾಖೆಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಮಾಡಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೀಗಿದ್ದರೂ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಬ್ಯಾಂಕ್‌ ಹೇಳಿದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುತ್ತಿರುವುದರ ವಿರುದ್ಧ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (AIBOC), ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (NCBE), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (AIBOA), ಬ್ಯಾಂಕ್ ನೌಕರರ ಒಕ್ಕೂಟ (BEFI), ಇಂಡಿಯನ್ ನ್ಯಾಷನಲ್ ಬ್ಯಾಂಕ್ ನೌಕರರ ಒಕ್ಕೂಟ ಕೆನರಾ ಬ್ಯಾಂಕ್ ನೌಕರರ ಕಾಂಗ್ರೆಸ್ (INBEF), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (INBOC), ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಸ್ಥೆ (NOBW), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (NOBO), ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (AINBOF) ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘ (ರಿ.) ಮುಷ್ಕರಕ್ಕೆ ಬೆಂಬಲ ನೀಡಿವೆ.

ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಪ್ರಧಾನಿ ಮೋದಿಯವರ ಖಾಸಗೀಕರಣ ಮಂತ್ರದ ಅಸಲೀ ಗುರಿ ಯಾವುದು?
ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ರೈಲ್ವೇ ಖಾಸಗೀಕರಣ; ಪ್ರಯಾಣ ದರ ನಿಗದಿ ಅಧಿಕಾರವೂ ಖಾಸಗಿಯವರಿಗೆ

2021 ರ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತನ್ನ ಹೂಡಿಕೆ ಯೋಜನೆಯ ಎರಡು ಭಾಗವಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು (ಪಿಎಸ್‌ಬಿ) ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು.

ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್
ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಸಂಕಷ್ಟದ ಹೊತ್ತಲ್ಲಿ ಮೋದಿಯ ಖಾಸಗೀಕರಣ ಸಮೃದ್ಧ ಕೊಯಿಲು!
ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಸರ್ಕಾರಿ ಸಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಮೋದಿ ಸರ್ಕಾರ

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com