ಪಶ್ಚಿಮ ಬಂಗಾಳ; 200 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರು

ಮೇ ಮೂರರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖ್ಯಮಂತ್ರಿಯೊಬ್ಬರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಪಶ್ಚಿಮ ಬಂಗಾಳ; 200 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರು

ಮೇ 3 ರಂದು ಪಶ್ಚಿಮ ಬಂಗಾಳವು ಬಿಜೆಪಿಯ ಮೊಟ್ಟ ಮೊದಲ ಮುಖ್ಯಮಂತ್ರಿಯನ್ನು ಹೊಂದಲಿದೆ, ಬಿಜೆಪಿ 200 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯು 200 ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತಾವಧಿಗಳು ಇನ್ನು ಬೆರಳೆಣಿಯಷ್ಟು ಮಾತ್ರ ಉಳಿದಿದೆ. ಮೇ ಮೂರರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖ್ಯಮಂತ್ರಿಯೊಬ್ಬರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮುಂದುವರೆಸಿದ ಕಮ್ಯುನಿಸ್ಟರ ರಕ್ತಪಾತದ ರಾಜಕಾರಣವು ಕೊನೆಗೊಳ್ಳಲಿದೆ. ಯಾಕೆಂದರೆ ಪಶ್ಚಿಮ ಬಂಗಾಳವು ಬಿಜೆಪಿಯ ಮುಖ್ಯಮಂತ್ರಿಯನ್ನು ಹೊಂದಲಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

200 ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲುವ ಭರವಸೆಯನ್ನು ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌ ಕೂಡಾ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ ಬರುವ ದಿನ ನಾವು 200 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿರುತ್ತೇವೆ. ಇದಕ್ಕಾಗಿ ನಾವು 5 ವರ್ಷಗಳಿಂದ ಕಾರ್ಯತಂತ್ರ ರೂಪಿಸಿದ್ದೇವೆ. ಖಂಡಿತವಾಗಿಯೂ 200 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಘೋಷ್‌ ಹೇಳಿದ್ದಾರೆ.

ನಾವು ಹಂತ ಹಂತವಾಗಿ ಕಾರ್ಯಾಚರಣೆ ನಡೆಸಿದ್ದೇವೆ. 2019ರ ಲೋಕ ಸಭಾ ಫಲಿತಾಂಶಗಳನ್ನು ನಾವು ಗಮನಿಸಿದ್ದೇವೆ. 19 ರಲ್ಲಿ ಅರ್ಧ, 21 ರಲ್ಲಿ ಸಂಪೂರ್ಣ ಸೀಟು ಪಡೆಯುವುದು ನಮ್ಮ ಮಂತ್ರ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮಾರ್ಚ್ 27 ಮತ್ತು ಏಪ್ರಿಲ್ 29 ರ ನಡುವೆ ಎಂಟು ಹಂತಗಳಲ್ಲಿ ನಡೆಯಲಿದೆ. ಕಳೆದ ವಾರ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವಾಗ, ರಾಜಕೀಯ ಹಿಂಸಾಚಾರದ ಭೀತಿಯಿಂದಾಗಿ ಬಂಗಾಳದಲ್ಲಿ ಮತದಾನವು ಒಂದು ತಿಂಗಳ ದೀರ್ಘ ಅವಧಿಯಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಸುಳಿವು ನೀಡಿತ್ತು. ಈ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಬಿಜೆಪಿಯ ಪ್ರಮುಖ ಚುನಾವಣಾ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಒತ್ತಾಯದ ಮೇರೆಗೆ ಇದನ್ನು ಮಾಡಲಾಗಿದೆ ಎಂದು ಆರೋಪಿಸಿದ್ದರು.

ಬಂಗಾಳವು ಈ ಬಾರಿ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಲಿದೆ. 2019 ರಲ್ಲಿ ರಾಜ್ಯದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ರಾಜ್ಯದಲ್ಲಿ ತನ್ನ ಬೃಹತ್ ಹೆಜ್ಜೆಗುರುತುಗಳನ್ನು ವಿಸ್ತರಿಸಿದೆ. ಎನ್‌ಸಿಪಿ-ಕಾಂಗ್ರೆಸ್‌ ಮೈತ್ರಿಯೂ ಪ್ರಬಲವಾಗಿದೆ. ಆಡಳಿತರೂಢ ಟಿಎಂಸಿ ಕೂಡಾ ಯಥಾಸ್ಥಿತಿ ಕಾಪಾಡಲು ಪ್ರಯತ್ನಿಸುತ್ತಿದೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com