ಕೋವಿಡ್‌ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ: ಸ್ಪಷ್ಟಣೆ ಕೇಳಿದ ಚುನಾವಣಾ ಆಯೋಗ

ಕೋವಿಡ್-19‌ ಲಸಿಕೆ‌ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವುದು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ ದೂರಿದೆ.
ಕೋವಿಡ್‌ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ: ಸ್ಪಷ್ಟಣೆ ಕೇಳಿದ ಚುನಾವಣಾ ಆಯೋಗ

ಕೋವಿಡ್‌-19 ವ್ಯಾಕ್ಸಿನ್‌ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವುದು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್‌ (TMC) ದೂರು ನೀಡಿದ ಬೆನ್ನಿಗೆ, ಚುನಾವಣಾ ಆಯೋಗವು (EC) ಆರೋಗ್ಯ ಸಚಿವಾಲಯದಿಂದ ಈ ಕುರಿತು ಸ್ಪಷ್ಟಣೆ ಕೇಳಿದೆ.

ಅದಾಗ್ಯೂ, ಚುನಾವಣಾ ಸಮಿತಿಯು ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ. ಈ ಕುರಿತು ಇಂಡಿಯನ್‌ ಎಕ್ಸ್‌ಪ್ರೆಸ್‌ ಜೊತೆ ಮಾಹಿತಿ ಹಂಚಿಕೊಂಡ ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು, ʼಈ ಪ್ರಮಾಣ ಪತ್ರಗಳನ್ನು ಆರೋಗ್ಯ ಸಚಿವಾಲಯದ ಸೂಚನೆಯ ಮೇರೆಗೆ ವಿತರಿಸಲಾಗಿದೆಯೇ ಎಂದು ಪರಿಶೀಲಿಸಲಾಗುತ್ತಿದೆ. ಎಂದಿನಂತೆ, ದೂರಿಗೆ ಸಂಬಂಧಿಸಿದ ಎಲ್ಲರ ಪ್ರತಿಕ್ರಿಯೆಯನ್ನು ನಾವು ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಯಿಂದ ಆಯೋಗವು ವರದಿಯನ್ನು ಕೋರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಟಿಎಂಸಿಯ ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ರಾಜ್ಯ ಸಿಇಒಗೆ ನಿರ್ದೇಶಿಸಲಾಗಿದೆ.

ಸಿಇಒ ವರದಿಯನ್ನು ಆಧರಿಸಿ, ಮತದಾನ ಸಮಿತಿಯು ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ ಎಂದು ಪಿಟಿಐ ವರದಿ ಮಾಡಿದೆ.

ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಟಿಎಂಸಿ, ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವುದು ಪಶ್ಚಿಮ ಬಂಗಾಳ ಹಾಗೂ ಇತರೆಡೆಯಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆಯೆಂದು ಆರೋಪಿಸಿ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇದರ ಮೂಲಕ ಪ್ರಧಾನ ಮಂತ್ರಿ ಆಡಳಿತ ಯಂತ್ರದ ದುರ್ಬಳಕೆ ಮಾಡುತ್ತಿದ್ದಾರೆಂದು ಟಿಎಂಸಿ ಆರೋಪಿಸಿತ್ತು.

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯನ್ನು ಘೋಷಿಸಿದ ದಿನ, ಫೆಬ್ರವರಿ 26 ರಂದು ಮಾದರಿ ಸಂಹಿತೆ ಜಾರಿಗೆ ಬಂದಿದೆ.

ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಇದನ್ನು "ಆಧಾರರಹಿತ" ಎಂದು ಬಣ್ಣಿಸಿದ್ದಾರೆ. ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲು ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಪೆಟ್ರೋಲ್‌ ಬಂಕ್‌ಗಳಲ್ಲಿರುವ ಪ್ರಧಾನಮಂತ್ರಿಯ ಭಾವಚಿತ್ರ ಹೊಂದಿದ ಎಲ್ಲಾ ರೀತಿಯ ಜಾಹಿರಾತು ಫಲಕಗಳನ್ನು ತೆಗೆಯುವಂತೆ ಬುಧವಾರ ಚುನಾವಣಾ ಆಯೋಗ ಆದೇಶಿಸಿತ್ತು.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com