ಮಮತಾ ಬ್ಯಾನರ್ಜಿ ಮೇಲೆ ದಾಳಿ: ಹೆಚ್‌ ಡಿ ಕುಮಾರಸ್ವಾಮಿ ಖಂಡನೆ

ಬುಧವಾರ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು.
 ಮಮತಾ ಬ್ಯಾನರ್ಜಿ ಮೇಲೆ ದಾಳಿ: ಹೆಚ್‌ ಡಿ ಕುಮಾರಸ್ವಾಮಿ ಖಂಡನೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಡೆದ ಹಲ್ಲೆಯನ್ನು ಕರ್ನಾಟಕ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ʼಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ.ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು.ಹಿಂಸೆಯಿಂದ ಅಲ್ಲ. ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಅವರು ಹೇಳಿದ್ದಾರೆ.

 ಮಮತಾ ಬ್ಯಾನರ್ಜಿ ಮೇಲೆ ದಾಳಿ: ಹೆಚ್‌ ಡಿ ಕುಮಾರಸ್ವಾಮಿ ಖಂಡನೆ
ನಂದಿಗ್ರಾಮ: ನಾಮಪತ್ರ ಸಲ್ಲಿಕೆಯ ನಂತರ ಮಮತಾ ಬ್ಯಾನರ್ಜಿ ಮೇಲೆ ದಾಳಿ

ಬುಧವಾರ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 29 ರಿಂದ ಏಪ್ರಿಲ್ 29 ರವರೆಗೆ ರಾಜ್ಯದ 294 ವಿಧಾನಸಭಾ ಸ್ಥಾನಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಸ್ಪರ್ಧಿಸುತ್ತಿದ್ದು, ಅವರ ವಿರುದ್ಧ ಟಿಎಂಸಿ ಮಾಜಿ ನಾಯಕ ಸುವೆಂದು ಅಧಿಕಾರಿ ಬಿಜೆಪಿ ಮೂಲಕ ಸ್ಪರ್ಧಿಸಲಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com