ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಸಂಸದ ರಾಮ್‌ ಸ್ವರೂಪ್‌ ಶರ್ಮಾ ದೇಹ ಪತ್ತೆ: ಆತ್ಮಹತ್ಯೆ ಶಂಕೆ

“ನೇಣು ಬಿಗಿದ ಸ್ಥಿತಿಯಲ್ಲಿ ರಾಮ್‌ ಸ್ವರೂಪ್‌ ಶರ್ಮಾ ಅವರ ಶವ ಪತ್ತೆಯಾಗಿದೆ, ಆದರೆ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಲಭ್ಯವಾಗಿಲ್ಲ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಸಂಸದ ರಾಮ್‌ ಸ್ವರೂಪ್‌ ಶರ್ಮಾ ದೇಹ ಪತ್ತೆ: ಆತ್ಮಹತ್ಯೆ ಶಂಕೆ

ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್‌ ಸ್ವರೂಪ್‌ ಶರ್ಮಾ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 62 ವರ್ಷದ ಶರ್ಮಾರವರು ಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಅವರ ಆಪ್ತಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣವೆಂದು ಪೊಲೀಸರು ಶಂಕಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶರ್ಮಾ ಅವರು ಆಪ್ತರ ಪೋನ್‌ ಕರೆಗೆ ಸ್ಪಂದಿಸದ ಕಾರಣ ಅನುಮಾನ ಬಂದು ಅವೆರ ವೈಯಕ್ತಿಕ ಸಹಾಯಕ ಪೊಲೀಸ್‌ ನಿಯಂತ್ರಣ ಕೊಠಡಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತಗೊಂಡ ಪೊಲೀಸರ ತಂಡ ದೆಹಲಿಯ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಶರ್ಮಾ ಅವರ ಕೊಠಡಿಯ ಬಾಗಿಲನ್ನು ಬಲವಂತವಾಗಿ ತೆರೆದು ಪರಿಶೀಲಿಸಿದಾಗ ಶರ್ಮಾ ಅವರು ಸೀಲಿಂಗ್‌ ಪ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ.

“ನೇಣು ಬಿಗಿದ ಸ್ಥಿತಿಯಲ್ಲಿ ರಾಮ್‌ ಸ್ವರೂಪ್‌ ಶರ್ಮಾ ಅವರ ಶವ ಪತ್ತೆಯಾಗಿದೆ, ಆದರೆ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಲಭ್ಯವಾಗಿಲ್ಲ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಶರ್ಮಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಇದೊಂದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com