ರಾಷ್ಟ್ರವ್ಯಾಪಿ NRC ಕುರಿತು ಇನ್ನೂ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ದೇಶಾದ್ಯಂತ ಎನ್‌ಆರ್‌ಸಿಯನ್ನು ಜಾರಿಗೆ ತರಲು ಸರ್ಕಾರಕ್ಕೆ ಏನಾದರೂ ಯೋಜನೆ ಇದೆಯೇ ಮತ್ತು ಎನ್‌ಆರ್‌ಸಿ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರಗಳಿಗೆ ಯಾವುದೇ ಸೂಚನೆಗಳನ್ನು ನೀಡಿದ್ದೀರಾ ಎಂದು ಕೇರಳ ಸಂಸದ ಅಬ್ದುಲ್ ವಹಾಬ್ ಅವರು ಪ್ರಶ್ನಿಸಿದ್ದಾರೆ.
ರಾಷ್ಟ್ರವ್ಯಾಪಿ NRC ಕುರಿತು ಇನ್ನೂ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ
ನಿತ್ಯಾನಂದ್ ರೈ

ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು (NRC) ತಯಾರಿಸಲು ಸರ್ಕಾರ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರೈ ತಿಳಿಸಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು (NRC) ತಯಾರಿಸಲು ಸರ್ಕಾರ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರೈ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೇಶಾದ್ಯಂತ ಎನ್‌ಆರ್‌ಸಿಯನ್ನು ಜಾರಿಗೆ ತರಲು ಸರ್ಕಾರಕ್ಕೆ ಏನಾದರೂ ಯೋಜನೆ ಇದೆಯೇ ಮತ್ತು ಎನ್‌ಆರ್‌ಸಿ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರಗಳಿಗೆ ಯಾವುದೇ ಸೂಚನೆಗಳನ್ನು ನೀಡಿದ್ದೀರಾ ಎಂದು ಕೇರಳ ಸಂಸದ ಅಬ್ದುಲ್ ವಹಾಬ್ ಅವರ ಪ್ರಶ್ನೆಗೆ ಉತ್ತರಿಸಿದ ನಿತ್ಯಾನಂದ ರೈ, "ಇದುವರೆಗೂ ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು ಸಿದ್ಧಪಡಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ" ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಪ್ರತಿಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆ (CAA), ಎನ್‌ಆರ್‌ಸಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (NPR) ಗೆ ವಿರೋಧ ವ್ಯಕ್ತಪಡಿಸಿದ್ದವು. ಕಳೆದ ಮಾರ್ಚ್‌ನಲ್ಲಿ ಕರೋನಾ ಸೋಂಕು ಭಾರತದಲ್ಲಿ ಪ್ರಭಾವ ಬೀರುವವರೆಗೂ ಸಿಎಎ-ಎನ್‌ಆರ್‌ಸಿ ವಿರುದ್ಧ ತೀವ್ರಗತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದವು.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com