ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನಲೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸ್ಸಾಂ ಪ್ರವಾಸ ಕೈಗೊಂಡಿದ್ದಾರೆ. ಅಸ್ಸಾಂ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟರೆ. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಯಾವ ಧರ್ಮವೂ ದ್ವೇಷ ಬಿತ್ತುವುದಿಲ್ಲ, ಆದರೆ ದೇಶದಲ್ಲಿ ಬಿಜೆಪಿ ಪಕ್ಷವು ಜನರಲ್ಲಿ ಬೇಧಭಾವ ಹುಟ್ಟಿಸುವ ಸಲುವಾಗಿ ದ್ವೇಷವನ್ನು ಮಾರುತ್ತಿದೆ ಎಂದು ದಿಬ್ರುಗರ್ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ಬಿಜೆಪಿ, ಆರ್ಎಸ್ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯೂ ಸಮಾಜವನ್ನು ವಿಭಜಿಸಲು ದ್ವೇಷ ಹರಡಲು ಪ್ರಯತ್ನಿಸುತ್ತಿದೆ. ಅವರು ಎಲ್ಲೆಲ್ಲಿ ದ್ವೇಷ ಹರಡುತ್ತಾರೋ ಅವರ ಆ ಪ್ರಯತ್ನಕ್ಕೆ ಕಾಂಗ್ರೆಸ್ ತಿರುಗೇಟಾಗಿ ಪ್ರೀತಿ ಮತ್ತು ಸಾಮರಸ್ಯವನ್ನು ಹರಡುತ್ತದೆ ಎಂದಿದ್ದಾರೆ.
ಆರ್ಎಸ್ಎಸ್ ಉಲ್ಲೇಖಿಸಿ ಮಾತನಾಡಿದ ರಾಹುಲ್ಗಾಂಧಿ “ನಾಗ್ಪುರದಲ್ಲಿರುವ ಶಕ್ತಿ (ಆರ್ಎಸ್ಆರ್) ಇಡೀ ದೇಶವನ್ನೇ ತ್ನನ ನಿಯಂತ್ರಣದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಯುವಕರು ಪ್ರೀತಿಯಿಂದ ಆತ್ಮವಿಶ್ವಾಸದಿಂದ ವಿರೋಧಿಸಬೇಕು. ಇದರಲ್ಲಿ ದೇಶದ ಭವಿಷ್ಯ ಅಡಗಿದೆ ಎಂದು ಯುವಜನತೆಗೆ ಸಂದೇಶ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಎರಡು ದಿನಗಳ ಕಾಲ ಅಸ್ಸಾಂ ಪ್ರವಾಸದಲ್ಲಿದ್ದು, ವಿಧಾನಸಭಾ ಚುನಾವಣಾ ಹಿನ್ನಲೆ, ಮಾರ್ಚ್ 21 ರಂದು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ.