‌IT ಕಾಯ್ದೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ದಿ ಕ್ವಿಂಟ್: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಕೋರ್ಟ್

ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಂ, ದಿ ವೈರ್ ಮತ್ತು ದಿ ನ್ಯೂಸ್ ಮಿನಿಟ್ ಈ ಹಿಂದೆ ಸಲ್ಲಿಸಿದ್ದ ಇದೇ ಮಾದರಿಯ ಅರ್ಜಿಯ ವಿಚಾರಣೆಯನ್ನು ಎಪ್ರಿಲ್‌ 16 ಕ್ಕೆ ಮುಂದೂಡಿದ್ದು, ಕ್ವಿಂಟ್‌ ಅರ್ಜಿಯ ವಿಚಾರಣೆಯನ್ನೂ ಅದೇ ದಿನಕ್ಕೆ ಮುಂದೂಡಿದೆ.
‌IT ಕಾಯ್ದೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ದಿ ಕ್ವಿಂಟ್: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಕೋರ್ಟ್

ಡಿಜಿಟಲ್ ಸುದ್ದಿ ಮಾಧ್ಯಮವನ್ನು ನಿಯಂತ್ರಿಸಲು ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳನ್ನು ಪ್ರಶ್ನಿಸಿ ಕ್ವಿಂಟ್ ಡಿಜಿಟಲ್ ಮೀಡಿಯಾ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.

ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ನೀಡಿ ಅವರ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಂ, ದಿ ವೈರ್ ಮತ್ತು ದಿ ನ್ಯೂಸ್ ಮಿನಿಟ್ ಈ ಹಿಂದೆ ಸಲ್ಲಿಸಿದ್ದ ಇದೇ ರೀತಿಯ ಮತ್ತೊಂದು ಅರ್ಜಿಯ ವಿಚಾರಣೆಯನ್ನು ಎಪ್ರಿಲ್‌ 16 ಕ್ಕೆ ಮುಂದೂಡಿದ್ದು, ಕ್ವಿಂಟ್‌ ಅರ್ಜಿಯ ವಿಚಾರಣೆಯನ್ನೂ ಅದೇ ದಿನಕ್ಕೆ ಮುಂದೂಡಿದೆ.

ತಿದ್ದುಪಡಿ ಮಾಡಿದ ಐಟಿ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಮತ್ತು ಸ್ಟ್ರೀಮಿಂಗ್ ಸಂಸ್ಥೆಗಳು ಸರ್ಕಾರ ವಿವಾದಾಸ್ಪದ ಎಂದು ಪರಿಗಣಿಸಿದ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವುದು ಮೊದಲಾದ ವಿವಾದಾತ್ಮಕ ಅಂಶಗಳಿವೆ.

ಅರ್ಜಿದಾರರನ್ನು ಪರ ವಕೀಲ ನಿತ್ಯ ರಾಮಕೃಷ್ಣನ್ ಅವರು ಮುಂದಿನ ವಿಚಾರಣೆಯ ದಿನಾಂಕದವರೆಗೆ ಡಿಜಿಟಲ್ ಸುದ್ದಿ ಮಾಧ್ಯಮಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದೆಂದು ಒತ್ತಾಯಿಸಿದ್ದಾರೆ. ಆದರೆ, ನ್ಯಾಯಪೀಠವು ಯಾವುದೇ ಮಧ್ಯಂತರ ಆದೇಶವನ್ನು ನೀಡಲು ನಿರಾಕರಿಸಿದೆ ಮತ್ತು ಅದನ್ನು ನಂತರದ ಹಂತದಲ್ಲಿ ಪರಿಗಣಿಸಲಾಗುವುದು ಎಂದು ಹೇಳಿದೆ..

ಕ್ವಿಂಟ್‌ನ ನಿರ್ದೇಶಕ ಮತ್ತು ಸಹ ಸಂಸ್ಥಾಪಕ ರಿತು ಕಪೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ನಿಬಂಧನೆಗಳ ಅಡಿಯಲ್ಲಿ ನೂತನ ಐಟಿ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಲಾಗಿದೆ.

ಅರ್ಜಿದಾರರು ತಾವು ದಿ ಕ್ವಿಂಟ್ ಎಂಬ ಸಂಪೂರ್ಣ ಡಿಜಿಟಲ್ ಸುದ್ದಿ ಮತ್ತು ಪ್ರಸಕ್ತ ವ್ಯವಹಾರಗಳ (current affairs) ಪ್ರಕಟಣೆಯನ್ನು ಹೊರತರುತ್ತಿದ್ದೇವೆ ಹಾಗಾಗಿ ಹೊಸ ಐಟಿ ನಿಯಮಗಳು ನಮಗೆ ನೇರವಾಗಿ ಬಾಧಿತವಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

‌IT ಕಾಯ್ದೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ದಿ ಕ್ವಿಂಟ್: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಕೋರ್ಟ್
ಹೊಸ ಐಟಿ ಕಾನೂನಿನ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ʼದಿ ವೈರ್ʼ ನೀಡಿದ ಕಾರಣಗಳೇನು?
‌IT ಕಾಯ್ದೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ದಿ ಕ್ವಿಂಟ್: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಕೋರ್ಟ್
ಸ್ವತಂತ್ರ ಮಾಧ್ಯಮಗಳ ನಿಯಂತ್ರಣಕ್ಕೆ ಹೊರಟ ಕೇಂದ್ರ ಸರ್ಕಾರ: ಸೋರಿಕೆಯಾದ ವರದಿಯಲ್ಲಿವೆ ಗಂಭಿರ ವಿಚಾರಗಳು!

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com