ಚುನಾವಣಾ ಪ್ರಚಾರದಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ: ದೆಹಲಿ ಹೈಕೋರ್ಟ್‌ಗೆ ಅರ್ಜಿ

ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ರಾಜಕೀಯ ನಾಯಕರು ಚುನಾವಣಾ ಪ್ರಚಾರ ನಡೆಸುವಾಗ ಈ ಹಕ್ಕಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ, ಎಂದು ಅರ್ಜಿದಾರರು ಹೇಳಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ: ದೆಹಲಿ ಹೈಕೋರ್ಟ್‌ಗೆ ಅರ್ಜಿ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹಲವು ನಾಯಕರು ಕೋವಿಡ್‌ ನಿಯಮಾವಲಿಗಳನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ಇಂತಹ ನಾಯಕರು ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕು ಎಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿದಾರರ ಪರ ವಕೀಲರಾದ ಗೌರವ್‌ ಪಾಠಕ್‌ ಅವರು “ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಪ್ರತಿಯೊಂದು ಚಟುವಟಿಕೆಗಳಲ್ಲಿಯೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಆದೇಶ ನೀಡಿದ ನಂತರ ಅದರ ಪಾಲನೆಯಾಗುತ್ತಿದೆಯೇ ಇಲ್ಲವೇ ಎಂಬುದನ್ನು ಚುನಾವಣಾ ಆಯೋಗ ಗಮನವಹಿಸಬೇಕು. ಅದು ಅದರ ಕರ್ತವ್ಯ,” ಎಂದಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಂದುವರಿದು, ಇತ್ತೀಚಿಗೆ ನಡೆದ ಪ್ರಚಾರ ಸಭೆಗಳಲ್ಲಿ ಅಭ್ಯರ್ಥಿಗಳು ಮತ್ತು ಅವರ ಪರ ಪ್ರಚಾರ ಮಾಡಿದವರು, ಮಾಸ್ಕ್‌ಗಳನ್ನು ಧರಿಸದೇ ಇರುವುದು ಮಾಧ್ಯಮ ವರದಿಗಳಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ರಾಜಕೀಯ ನಾಯಕರು ಚುನಾವಣಾ ಪ್ರಚಾರ ನಡೆಸುವಾಗ ಈ ಹಕ್ಕಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ,” ಎಂದು ಹೇಳಿದ್ದಾರೆ. ಇದರೊಂದಿಗೆ ನಿಯಮಾವಳಿ ಪಾಲಿಸದ ಅಭ್ಯರ್ಥಿಗಳು ಹಾಗೂ ಪ್ರಚಾರಕನ್ನು ಪ್ರಚಾರ ಸಭೆಯಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಬೇಕೆಂದು ಹೇಳಿದ್ದಾರೆ.

ಈ ಕುರಿತಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರ್ಟ್‌ ಕೇಳಿದೆ. ಕೋರ್ಟ್‌ ನೋಟೀಸ್‌ಗೆ ಉತ್ತರಿಸಿರುವ ಚುನಾವಣಾ ಆಯೋಗದ ಪರ ವಕೀಲರಾದ ಸಿದ್ದಾಂತ್‌ ಕುಮಾರ್‌ ಅವರು ದೆಹಲಿಯಲ್ಲಿ ಯಾವುದೇಚುನಾವಣೆ ನಡೆಯುತ್ತಿಲ್ಲ ಮತ್ತು ಯಾವುದೇ ನಿಯಮಾವಳಿಗಳ ಉಲ್ಲಂಘನೆಯಾಗಿಲ್ಲ, ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com