45 ವರ್ಷ ಮೇಲ್ಪಟ್ಟ ಎಲ್ಲರಿಗೂ ಎಪ್ರಿಲ್‌ 1 ರಿಂದ ಕರೋನಾ ಲಸಿಕೆ: ಕೇಂದ್ರ

ಪ್ರಸ್ತುತ, 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಕೋವಿಡ್‌ ಲಸಿಕೆ ಪಡೆಯಲು ಅವಕಾಶವಿದೆ.
 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಎಪ್ರಿಲ್‌ 1 ರಿಂದ ಕರೋನಾ ಲಸಿಕೆ: ಕೇಂದ್ರ

ಹಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಶೀಘ್ರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಪ್ರಿಲ್‌ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌ ಲಸಿಕೆ ಹಾಕುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್‌ ಜಾವೇಡ್ಕರ್‌ ʼ45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರೂ ಕೋವಿಡ್‌ ಲಸಿಕೆಗಾಗಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಸಭೆಯಲ್ಲಿ, ಕರೋನಾ ಲಸಿಕೆ ನೀಡುವ ಜನಸಂಖ್ಯೆ ವ್ಯಾಪ್ತಿಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಸ್ತುತ, 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಕೋವಿಡ್‌ ಲಸಿಕೆ ಪಡೆಯಲು ಅವಕಾಶವಿದೆ.

ಜರೋನಾ ವೈರಸ್‌ ಟಾಸ್ಕ್‌ ಫೋರ್ಸ್‌ ತಜ್ಞರ ಸಲಹೆ ಮೇರೆಗೆ ಈ ನಿರ್ಧಾರ ತಳೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕರೋನಾ ಲಸಿಕೆ ಕೊರತೆ ಕುರಿತಂತೆ ಸುದ್ದಿಯನ್ನು ತಳ್ಳಿಹಾಕಿರುವ ಜಾವೇಡ್ಕರ್‌, ಯಾವುದೇ ತೆರನಾದ ಲಸಿಕೆಯ ಕೊರತೆಯನ್ನು ದೇಶ ಎದುರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜನವರಿಯಿಂದ ಪ್ರಾರಂಭವಾಗಿರುವ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ, ಇದುವರೆಗೂ 4.85 ಕೋಟಿ ಜನರು ಮೊದಲ ಹಂತದ ಲಸಿಕೆ ಪಡೆದಿದ್ದು, 80 ಲಕ್ಷಕ್ಕೂ ಅಧಿಕ ಮಂದಿ ಎರಡನೇ ಹಂತದ ಲಸಿಕೆ ಪಡೆದಿದ್ದಾರೆಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com