ಶಿರಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ

ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರ ಪರವಾಗಿ ಸಿಎಂ ಬಿಎಸ್‌ವೈ ಬ್ಯಾಟಿಂಗ್‌ ಮಾಡಿದರೆ ಅವರ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಹೊಂದಿದ್ದಾರೆ.
ಶಿರಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ

ಶಿರಾ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರ ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ನಾಮಪತ್ರವನ್ನು ಸಲ್ಲಿಸಲಾಯಿತು.

ಕಳೆದ ಬಾರಿ ನಾಮಪತ್ರಸಲ್ಲಿಕೆ ವೇಳೆ ಶುಭ ಗಳಿಗೆಗೆ ನಾಮಪತ್ರ ಸಲ್ಲಿಸಲಾಗದೇ ಇರುವುದರಿಂದ ಈ ಬಾರಿ ಅತ್ಯಂತ ಪ್ರಶಸ್ತವಾದ ಘಳಿಗೆಯಲ್ಲಿ ಅಂದರೆ ಮಧ್ಯಾಹ್ನ 12.27ಕ್ಕೆ ಸರಿಯಾಗಿ ನಾಮಪತ್ರವನ್ನು ಸಲ್ಲಿಸಿದರು.

ಈ ಕ್ಷೇತ್ರದಲ್ಲಿ ಇವರಿಗೆ ಹತ್ತಿರದ ಪ್ರತಿಸ್ಪರ್ಧಿಯಾಗಿ ಜೆಡಿಎಸ್‌ನ ಅಮ್ಮಜಮ್ಮ ಅವರು ಸ್ಪರ್ಧಿಸಲಿದ್ದಾರೆ. ಇತ್ತೀಚಿಗೆ ದೈವಾಧೀನರಾದ ಜೆಡಿಎಸ್‌ ಶಾಸಕ ಸತ್ಯ ನಾರಾಯಣ್‌ ಅವರ ಪತ್ನಿಯನ್ನೇ ಜೆಡಿಎಸ್‌ ಕಣಕ್ಕಿಳಿಸಿದೆ. ಈ ಮೂಲಕ ಅನುಕಂಪದ ಮತಗಳನ್ನು ಸೆಳೆಯುವ ಪ್ರಯತ್ನಪಟ್ಟಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಆರ್‌ ಆರ್‌ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕುಸುಮಾ ರವಿ ಅವರು ಸ್ಪರ್ಧಿಸಲಿದ್ದಾರೆ. ಇವರಿಗೆ ಎದುರಾಳಿಯಾಗಿ ಬಿಜೆಪಿ ಪಕ್ಷದಿಂದ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ಶಿರಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ
ವ್ಯಕ್ತಿಗಳ ಪಾಲಿಗಲ್ಲದಿದ್ದರೂ ಈ ಉಪಚುನಾವಣೆ ಪಕ್ಷಗಳ ಪಾಲಿಗೆ ಪ್ರತಿಷ್ಠೆಯೇ!

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಮುನಿರತ್ನ ಅವರ ಪರವಾಗಿ ಸಿಎಂ ಬಿಎಸ್‌ವೈ ಬ್ಯಾಟಿಂಗ್‌ ಮಾಡಿದರೆ ಅವರ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಹೊಂದಿದ್ದಾರೆ. ಪಕ್ಷದೊಳಗಿನ ಆಂತರಿಕ ತಿಕ್ಕಾಟದಿಂದ ಇನ್ನೂ ಅಭ್ಯರ್ಥಿಯ ಹೆಸರು ಅಂತಿಮಗೊಂಡಿಲ್ಲ.

ಸಿಎಂ ಯಡಿಯೂರಪ್ಪನವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೋ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com