ಕರ್ನಾಟಕ: 925 ತಲುಪಿದ ಕರೋನಾ ಸೋಂಕಿತರ ಸಂಖ್ಯೆ
Admin
ರಾಜ್ಯ

ಕರ್ನಾಟಕ: 925 ತಲುಪಿದ ಕರೋನಾ ಸೋಂಕಿತರ ಸಂಖ್ಯೆ

ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ ತಲುಪಿದೆ. ಇದುವರೆಗೂ 433 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 31 ತಲುಪಿದೆ. 11 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಧ್ವನಿ ವರದಿ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 63 ಕೋವಿಡ್‌-19 ಪ್ರಕರಣಗಳು ಬೆಳಕಿಗೆ ಬಂದಿವೆ. ಮೇ 12ರ ಸಂಜೆ 5 ಗಂಟೆಗೆ ಆರೋಗ್ಯ ಇಲಾಖೆ ನೀಡಿದ ಕರೋನಾ ಸೋಂಕಿನ ಕುರಿತಾದ ಮಾಹಿತಿ ಪ್ರಕಾರ ಈಗ ರಾಜ್ಯದಲ್ಲಿ 460 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ ತಲುಪಿದೆ. ಇದುವರೆಗೂ 433 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 31 ತಲುಪಿದೆ. 11 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇ 11 ಸಂಜೆ 05 ರಿಂದ ಮೇ 12 ರ ಸಂಜೆ 05 ರವರೆಗೆ ಪತ್ತೆಯಾದ ಪ್ರಕರಣದಲ್ಲಿ ಬಾಗಲಕೋಟೆಯಲ್ಲಿ 15 ಪ್ರಕರಣಗಳು ದಾಖಲಾಗಿದ್ದು, ದಾವಣಗೆರೆಯಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ಧಾರವಾಡದಲ್ಲಿ 9 ಪ್ರಕರಣ ಪತ್ತೆಯಾಗಿದ್ದು, ಗದಗದಲ್ಲಿ 3 ಪ್ರಕರಣ ದಾಖಲಾಗಿವೆ. ಕೋಲಾರ ಮತ್ತು ಹಾಸನದಲ್ಲಿ ತಲಾ 5 ಪ್ರಕರಣ ದಾಖಲಾಗಿದ್ದು, ಬೀದರ್‌, ದಕ್ಷಿಣ ಕನ್ನಡ ಹಾಗೂ ಯಾದಗಿರಿಯಲ್ಲಿ ತಲಾ 2 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 4 ಪ್ರಕರಣಗಳು ಪತ್ತೆಯಾಗಿದ್ದು, ಮಂಡ್ಯ, ಕಲಬುರಗಿ, ಬಳ್ಳಾರಿ ಹಾಗೂ ಚಿಕ್ಕ ಬಳ್ಳಾಪುರದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ.

4_5896809506918105694.pdf
Preview
12-05-2020 05-00 English.pdf
Preview

Click here Support Free Press and Independent Journalism

Pratidhvani
www.pratidhvani.com