ಕರ್ನಾಟಕ: 1,743 ತಲುಪಿದ ಕರೋನಾ ಪೀಡಿತರ ಸಂಖ್ಯೆ
Admin
ರಾಜ್ಯ

ಕರ್ನಾಟಕ: 1,743 ತಲುಪಿದ ಕರೋನಾ ಪೀಡಿತರ ಸಂಖ್ಯೆ

ಕರ್ನಾಟಕದಲ್ಲಿ ಇಂದು ಕಂಡುಬಂದ ಪ್ರಕರಣಗಳಲ್ಲಿ ಹೆಚ್ಚಿನವು ಅನ್ಯ ರಾಜ್ಯಗಳಿಂದ ಬಂದಿರುವಂತಹದ್ದು. ಮಹಾರಾಷ್ಟ್ರದಿಂದ ಬಂದವರಲ್ಲಿ ಅತೀ ಹೆಚ್ಚು ಕರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಐಸಲೋಷನ್ನಲ್ಲಿರಿಸಲಾಗಿದೆ.

ಪ್ರತಿಧ್ವನಿ ವರದಿ

ಕರ್ನಾಟಕದಲ್ಲಿ 138 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪ್ರಕರಣಗಳ ಸಂಖ್ಯೆ 1,743 ಕ್ಕೆ ತಲುಪಿದೆಯೆಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮೇ 22ರ ಸಂಜೆ 05 ಗಂಟೆಗೆ ಹೊರಡಿಸಿರುವ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

597 ಮಂದಿ ಕರೋನಾ ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯವಾಗಿರುವ 1104 ಪ್ರಕರಣಗಳಲ್ಲಿ 19 ಮಂದಿ ಸೋಂಕಿತರ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟಕದಲ್ಲಿ ಇಂದು ಕಂಡುಬಂದ ಪ್ರಕರಣಗಳಲ್ಲಿ ಹೆಚ್ಚಿನವು ಅನ್ಯ ರಾಜ್ಯಗಳಿಂದ ಬಂದಿರುವಂತಹದ್ದು. ಮಹಾರಾಷ್ಟ್ರದಿಂದ ಬಂದವರಲ್ಲಿ ಅತೀ ಹೆಚ್ಚು ಕರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಐಸಲೋಷನ್ನಲ್ಲಿರಿಸಲಾಗಿದೆ.

22.05.2020. Evening Bulletindocx.pdf
Preview

Click here Support Free Press and Independent Journalism

Pratidhvani
www.pratidhvani.com