ಕರ್ನಾಟಕ: ಕಳೆದ 24 ಗಂಟೆಗಳಲ್ಲಿ 216 ಹೊಸ ಕರೋನಾ ಪ್ರಕರಣಗಳು ದಾಖಲು
ರಾಜ್ಯ

ಕರ್ನಾಟಕ: ಕಳೆದ 24 ಗಂಟೆಗಳಲ್ಲಿ 216 ಹೊಸ ಕರೋನಾ ಪ್ರಕರಣಗಳು ದಾಖಲು

ಇಂದು 11 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 608 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 23 ರ ಸಂಜೆ ಐದು ಗಂಟೆಗೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 216 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1959 ಕ್ಕೇರಿದೆ.

ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರದಿಂದ ಹಿಂತಿರುಗಿರುವವರಲ್ಲಿ ಪತ್ತೆಯಾಗಿರುತ್ತದೆ.

ಇಂದು 11 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 608 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ರಾಜ್ಯದಲ್ಲಿ ಸಕ್ರಿಯವಾಗಿರುವ 1307 ಪ್ರಕರಣಗಳಲ್ಲಿ 1294 ಮಂದಿ ಕರೋನಾ ಸೋಂಕಿತರಿಗೆ ಗೊತ್ತುಪಡಿಸಿದ ಸಾಮಾನ್ಯ ವಾರ್ಡುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿರುವ 13 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 42 ಮಂದಿ ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

23.05.2020 EMB Kannada.pdf
Preview

Click here Support Free Press and Independent Journalism

Pratidhvani
www.pratidhvani.com