ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ, ದ.ಕ. ಮುಂಚೂಣಿಯಲ್ಲಿ
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ, ದ.ಕ. ಮುಂಚೂಣಿಯಲ್ಲಿ

ಕಾರ್ಕಳ ತಾಲ್ಲೂಕಿನ ಸರ್ಕಾರಿ ಪಿಯು ಕಾಲೇಜು ಹಾಗೂ ಕಡೂರಿನ ಜೋಡಿಹೊಚ್ಚಿಹಳ್ಳಿ ಸರ್ಕಾರಿ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ ದೊರಕಿದೆ.

ಪ್ರತಿಧ್ವನಿ ವರದಿ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ. 61.80 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ದಾಖಲಾಗಿದ್ದು (90.71) ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ (90.71) ಕೊಡಗು ಶೇ. 81.53 ಫಲಿತಾಂಶದೊಂದಿಗೆ ತೃತೀಯ ಸ್ಥಾನದಲ್ಲಿದೆ. ಈ ಬಾರಿಯ ಪರೀಕ್ಷೆಯಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 76.2%, ವಾಣಿಜ್ಯ ವಿಭಾಗದಲ್ಲಿ 65.52% ಹಾಗೂ ಕಲಾ ವಿಭಾಗದಲ್ಲಿ 41.27% ಫಲಿತಾಂಶ ಬಂದಿದೆ. ಈ ವರ್ಷ ಒಟ್ಟು 6,83,277 ಪರೀಕ್ಷೆ ಬರೆದಿದ್ದು ಅದರಲ್ಲಿ 4,17,297 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕಾರ್ಕಳ ತಾಲ್ಲೂಕಿನ ಸರ್ಕಾರಿ ಪಿಯು ಕಾಲೇಜು ಹಾಗೂ ಕಡೂರಿನ ಜೋಡಿಹೊಚ್ಚಿಹಳ್ಳಿ ಸರ್ಕಾರಿ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ ದೊರಕಿದೆ.

ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ www.karresults.nic.in

Click here to follow us on Facebook , Twitter, YouTube, Telegram

Pratidhvani
www.pratidhvani.com