ಕರ್ನಾಟಕ: 70 ಸಾವಿರ ದಾಟಿದ ಕರೋನಾ ಸೋಂಕಿತರ ಸಂಖ್ಯೆ
ರಾಜ್ಯ

ಕರ್ನಾಟಕ: 70 ಸಾವಿರ ದಾಟಿದ ಕರೋನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಸಕ್ರಿಯವಾಗಿರುವ 44,140 ಪ್ರಕರಣಗಳಲ್ಲಿ, ಆರೋಗ್ಯ ಸ್ಥಿತಿ ಗಂಭೀರವಾಗಿರುವ 583 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 61 ಮಂದಿ ಇಂದು ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. ರಾಜ್ಯದಲ್ಲಿ ಇದುವರೆಗೂ ಕರೋನಾ ಸೋಂಕಿನಿಂದಾಗಿ 1464 ಮಂದಿ ಮೃತಪಟ್ಟಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜುಲೈ 21ರ ಸಂಜೆ ಐದು ಗಂಟೆಗೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 3649 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 71,069 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 24,549 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ರಾಜ್ಯದಲ್ಲಿ ಸಕ್ರಿಯವಾಗಿರುವ 44,140 ಪ್ರಕರಣಗಳಲ್ಲಿ, ಆರೋಗ್ಯ ಸ್ಥಿತಿ ಗಂಭೀರವಾಗಿರುವ 583 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 61 ಮಂದಿ ಇಂದು ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. ರಾಜ್ಯದಲ್ಲಿ ಇದುವರೆಗೂ ಕರೋನಾ ಸೋಂಕಿನಿಂದಾಗಿ 1,464 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ತಾಸುಗಳಲ್ಲಿ 37,148 ಹೊಸ ಕರೋನಾ ಪ್ರಕರಣಗಳು ದೇಶದಲ್ಲಿ ಕಂಡುಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 11,55,191 ತಲುಪಿದೆ. ಇದುವರೆಗೂ 7,24,578 ಮಂದಿ ಕರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 4,02,529 ಸಕ್ರಿಯ ಕರೋನಾ ಪ್ರಕರಣಗಳಿವೆ. ಒಟ್ಟು ಮೃತಪಟ್ಟವರ ಸಂಖ್ಯೆ 28,084 ತಲುಪಿದೆ.

Click here to follow us on Facebook , Twitter, YouTube, Telegram

Pratidhvani
www.pratidhvani.com