PSI ಕಿರಣ್ ಕುಮಾರ್ ಸಾವಿನ ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ
ರಾಜ್ಯ

PSI ಕಿರಣ್ ಕುಮಾರ್ ಸಾವಿನ ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. PSI ಕಿರಣ್ ಸಾವಿನ ಕುರಿತಾಗಿಯೂ ತನಿಖೆಯಾಗಲಿ, ಎಂದು ಹೆಚ್‌ಡಿಕೆ ಆಗ್ರಹಿಸಿದ್ದಾರೆ.

ಪ್ರತಿಧ್ವನಿ ವರದಿ

ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ, ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಬಿಜೆಪಿ ಮೇಲೆ ಹರಿಹಾಯ್ದಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿರುವ ಅವರು, ಕಿರಣ್‌ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ, ಎಂದು ನೇರ ಆರೋಪ ಮಾಡಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಹೆಚ್‌ಡಿಕೆ, ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು, ಎಂದಿದ್ದಾರೆ.

“ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ,” ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಇದಕ್ಕೂ ಮುನ್ನ ಐಎಎಸ್ ಅಧಿಕಾರಿ,ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ, ಎಂದು ಅವರು ಹೇಳಿದ್ದಾರೆ.

Click here to follow us on Facebook , Twitter, YouTube, Telegram

Pratidhvani
www.pratidhvani.com