ಕರ್ನಾಟಕ: ಹೊಸ ಪ್ರಕರಣಗಳಿಗಿಂತ ಚೇತರಿಸಿಕೊಂಡವರ ಪ್ರಮಾಣ ಹೆಚ್ಚು
ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಅಂಕಿ ಅಂಶದ ಪ್ರಕಾರ 6259 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅದೇ ವೇಳೆ 6777 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ
ಕರ್ನಾಟಕ: ಹೊಸ ಪ್ರಕರಣಗಳಿಗಿಂತ ಚೇತರಿಸಿಕೊಂಡವರ ಪ್ರಮಾಣ ಹೆಚ್ಚು

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಅಂಕಿ ಅಂಶದ ಪ್ರಕಾರ 6259 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅದೇ ವೇಳೆ 6777 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 69,272 ಕ್ಕೇರಿದೆ.

ರಾಜ್ಯದಲ್ಲಿ ಒಟ್ಟು 1,45,830 ಕೋವಿಡ್‌ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಪ್ರಸ್ತುತ ರಾಜ್ಯದಲ್ಲಿ 73,846 ಸಕ್ರಿಯ ಪ್ರಕರಣಗಳಿವೆ. ಮತ್ತೆ 110 ಮಂದಿಯನ್ನು ಸೋಂಕು ಬಲಿ ಪಡೆದುಕೊಂಡಿದೆ. ರಾಜ್ಯದಲ್ಲಿ ಕರೋನಾದಿಂದಾಗಿ 2704 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 2035 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 63,033 ತಲುಪಿದೆ. ಇಂದು 4274 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 27877 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೂ ನಗರದಲ್ಲಿ 1134 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

04-08-2020 HMB Kannada.pdf
download
<a href="http://truthprofoundationindia.com/">http://truthprofoundationindia.com/</a>

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com