ಕರ್ನಾಟಕದಲ್ಲಿ 84,232 ಮಂದಿ ಕರೋನಾದಿಂದ ಚೇತರಿಕೆ
Admin
ರಾಜ್ಯ

ಕರ್ನಾಟಕದಲ್ಲಿ 84,232 ಮಂದಿ ಕರೋನಾದಿಂದ ಚೇತರಿಕೆ

ರಾಜ್ಯದಲ್ಲಿ 6670 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,64,924 ಕ್ಕೇರಿದೆ

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 7 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 6670 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,64,924 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 84,232 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 77,686 ಸಕ್ರಿಯ ಕರೋನಾ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2147 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 69,572 ತಲುಪಿದೆ. ಒಟ್ಟು 35063 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,200 ಮಂದಿ ಮರಣಹೊಂದಿದ್ದಾರೆ.

07-08-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com