ಕರ್ನಾಟಕ: 2 ಲಕ್ಷದ ಗಡಿ ದಾಟಿದ ಕರೋನಾ ಪ್ರಕರಣಗಳ ಸಂಖ್ಯೆ
ರಾಜ್ಯ

ಕರ್ನಾಟಕ: 2 ಲಕ್ಷದ ಗಡಿ ದಾಟಿದ ಕರೋನಾ ಪ್ರಕರಣಗಳ ಸಂಖ್ಯೆ

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1,893 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 81,733 ತಲುಪಿದೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 13 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 8,609 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2,03,200 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 1,21,242 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 78,337 ಸಕ್ರಿಯ ಕರೋನಾ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1,893 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 81,733 ತಲುಪಿದೆ. ಒಟ್ಟು 47,246 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,338 ಮಂದಿ ಮರಣಹೊಂದಿದ್ದಾರೆ.

13-08-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com