ಕರ್ನಾಟಕ: 79,201 ಸಕ್ರಿಯ ಕರೋನಾ ಪ್ರಕರಣಗಳು
ರಾಜ್ಯ

ಕರ್ನಾಟಕ: 79,201 ಸಕ್ರಿಯ ಕರೋನಾ ಪ್ರಕರಣಗಳು

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,452 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 84,185 ತಲುಪಿದೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 14 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 7,908 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2,11,108 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 1,28,182 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 79,201 ಸಕ್ರಿಯ ಕರೋನಾ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,452 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 84,185 ತಲುಪಿದೆ. ಒಟ್ಟು 49,392 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,360 ಮಂದಿ ಮರಣಹೊಂದಿದ್ದಾರೆ.

14-08-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com