ದ.ಕದ ಖ್ಯಾತಿಗೆ ಅಸೂಯೆಪಟ್ಟು ನಳಿನ್‌‌ರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರಬಹುದು- ಸಿದ್ದರಾಮಯ್ಯ

ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್‌ ಕುಮಾರ್‌ ಕಟೀಲ್‌ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದ ...
ದ.ಕದ ಖ್ಯಾತಿಗೆ ಅಸೂಯೆಪಟ್ಟು ನಳಿನ್‌‌ರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರಬಹುದು- ಸಿದ್ದರಾಮಯ್ಯ
Admin

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್‌ ಜಗಳ ತಾರಕಕ್ಕೇರಿದೆ. ಸಿದ್ದರಾಮಯ್ಯರನ್ನು ಹಿಂದುಳಿದ ವರ್ಗಗಳ ನಕಲಿ ನಾಯಕ ಎಂದು ಕರೆದಿರುವ ನಳಿನ್‌ರನ್ನು ನಕಲಿ ಶ್ಯಾಮನೆಂದು ಸಿದ್ದರಾಮಯ್ಯ ಜರೆದಿದ್ದಾರೆ.

ಬಿಜೆಪಿ ವಿರುದ್ಧ ಅನಗತ್ಯ ಆರೋಪ ನಡೆಸುತ್ತಿರುವ ಸಿದ್ದರಾಮಯ್ಯ ಅವರು ದಲಿತ, ಹಿಂದುಳಿದ ವರ್ಗಗಳ ನಕಲಿ ನಾಯಕ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದರು. 2013-18 ರ ಸಿದ್ದರಾಮಯ್ಯ ಅವಧಿಯಲ್ಲಿ ಕರಾವಳಿಯಲ್ಲಿ 23 ಹಿಂದೂ ಯುವಕರ ಹತ್ಯೆ ನಡೆದಿತ್ತು. ಮೈಸೂರಿನಲ್ಲಿ ಮೂರು, ಬೆಂಗಳೂರು ಹಾಗೂ ಕೊಡಗಿನಲ್ಲಿ ತಲಾ ಒಬ್ಬರ ಹತ್ಯೆಯಾಗಿತ್ತು. ಹತ್ಯೆಗೊಳಗಾದ ಎಲ್ಲಾ 28 ಯುವಕರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಳಿನ್‌ ಕುಮಾರ್‌ ಹೇಳಿಕೆಗೆ ಉತ್ತರಿಸಿರುವ ಸಿದ್ದರಾಮಯ್ಯ, 2013-18ರ ಅವಧಿಯಲ್ಲಿ ಕೋಮುಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್‌ ಕುಮಾರ್‌ ಕಟೀಲ್‌ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದಿದ್ದಾರೆ.

ಹಿಂದೂ ಯುವಕರ ಹತ್ಯೆ ಕುರಿತಂತೆ ಮಾತನಾಡಿದ ಸಿದ್ದರಾಮಯ್ಯ, 2013-18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ?

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ?

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com