ಕರ್ನಾಟಕ: 5938 ಹೊಸ ಕರೋನಾ ಪ್ರಕರಣಗಳು ಪತ್ತೆ
ರಾಜ್ಯ

ಕರ್ನಾಟಕ: 5938 ಹೊಸ ಕರೋನಾ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ 1,89,564 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 83,551 ಸಕ್ರಿಯ ಕರೋನಾ ಪ್ರಕರಣಗಳಿವೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 23ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5938 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 2,77,814 ಕ್ಕೇರಿದೆ.

ಇದುವರೆಗೂ ರಾಜ್ಯದಲ್ಲಿ 1,89,564 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 83,551 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 4,996 ಸೋಂಕಿತರು ಬಿಡುಗಡೆಹೊಂದಿದ್ದಾರೆ. 787 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,126 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,07,875 ತಲುಪಿದೆ. ಒಟ್ಟು 69,861 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,668 ಮಂದಿ ಸಾವನ್ನಪ್ಪಿದ್ದಾರೆ.

23-08-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com