ಕರ್ನಾಟಕ: ಒಂದೇ ದಿನದಲ್ಲಿ 9386 ಹೊಸ ಕರೋನಾ ಪ್ರಕರಣ ದಾಖಲು
ರಾಜ್ಯ

ಕರ್ನಾಟಕ: ಒಂದೇ ದಿನದಲ್ಲಿ 9386 ಹೊಸ ಕರೋನಾ ಪ್ರಕರಣ ದಾಖಲು

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,09,792 ತಲುಪಿದ್ದು, ಇವರಲ್ಲಿ 2,19,554 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜುಲೈ 28ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9386 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3357 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,09,792 ತಲುಪಿದ್ದು, ಇವರಲ್ಲಿ 2,19,554 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 84,987 ಪ್ರಕರಣಗಳಲ್ಲಿ, 747 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 5232 ಮಂದಿ ಅಸುನೀಗಿದ್ದಾರೆ.

Click here to follow us on Facebook , Twitter, YouTube, Telegram

Pratidhvani
www.pratidhvani.com