ಕರ್ನಾಟಕ: ಕೋವಿಡ್‌ನಿಂದ 2,35,128 ಸೋಂಕಿತರು ಗುಣಮುಖ
ರಾಜ್ಯ

ಕರ್ನಾಟಕ: ಕೋವಿಡ್‌ನಿಂದ 2,35,128 ಸೋಂಕಿತರು ಗುಣಮುಖ

ಸಕ್ರಿಯವಾಗಿರುವ 86,446 ಪ್ರಕರಣಗಳಲ್ಲಿ, 721 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಗಸ್ಟ್‌ 29ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 8324 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2993 ಹೊಸ ಪ್ರಕರಣಗಳು ಕಂಡು ಬಂದಿವೆ.

Agust 29.pdf
Preview

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,27,076 ತಲುಪಿದ್ದು, ಇವರಲ್ಲಿ 2,35,128 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 86,446 ಪ್ರಕರಣಗಳಲ್ಲಿ, 721 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 5483 ಮಂದಿ ಅಸುನೀಗಿದ್ದಾರೆ.

Click here to follow us on Facebook , Twitter, YouTube, Telegram

Pratidhvani
www.pratidhvani.com